ಪ್ರತ್ಯೇಕ ಜೂಜಾಟ ಪ್ರಕರಣ: ಆರು ಜನರ ಬಂಧನ
ಶಿವಮೊಗ್ಗ, ನ. 15: ಶಿವಮೊಗ್ಗದಲ್ಲಿ ನಡೆದ ಎರಡು ಪ್ರತ್ಯೇಕ ಜೂಜಾಟ ಪ್ರಕರಣದಲ್ಲಿ ಆರು ಜನರನ್ನು ಬಂಧಿಸಿರುವ ಪೊಲೀಸರು ಸಾವಿರಾರು ರೂ. ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ನಗರದ ಹೊರವಲಯ ಗಾಜನೂರು ಗ್ರಾಮದಲ್ಲಿ ತೂರಾಬಿಲ್ಲೆ ಜೂಜಿನಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 480 ರೂ. ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಟಿಪ್ಪುನಗರ ಬಡಾವಣೆಯಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಯಿಂದ 750 ರೂ. ವಶಕ್ಕೆ ಪಡೆಯಲಾಗಿದೆ. ಸಬ್ ಇನ್‌ಸ್ಪೆಕ್ಟರ್ ಅನಿತಾಕುಮಾರಿ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಅಪಘಾತ: ಚಿಕಿತ್ಸೆ ಫಲಿಸದೆೆ ಬಾಲಕ ಮೃತ್ಯು
ಶಿಕಾರಿಪುರ, ನ. 15: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಚಿನ್ನಪ್ಪರವರ ಪುತ್ರ ಹರ್ಷ(12) ಮಂಗಳವಾರ ಸಂಜೆ ವೇಳೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.





