ಕನ್ನಡ ಸಾಹಿತ್ಯಕ್ಕೆ ಕ್ರೈಸ್ತ ಮಿಷನರಿಗಳ ಸೇವೆ ಅಪಾರ: ಮೀನಾಕ್ಷಿ ರಾಮಚಂದ್ರ

ಮಂಗಳೂರು, ನ.15: ಕನ್ನಡ ಸಾಹಿತ್ಯಕ್ಕೆ ಕ್ರೈಸ್ತ ಮಿಷನರಿಗಳ ಸೇವೆ ಅಪಾರ. ಇ.ಪಿ. ರೈಸ್, ಹರ್ಮನ್ ಮೋಗ್ಲಿಂಗ್, ಫೆರ್ಡಿನಾಂಡ್ ಕಿಟ್ಟೆಲ್‌ರಂತಹವರು ಕನ್ನಡ ಶಾಸನ ಸಂಗ್ರಹ, ಹಸ್ತಪ್ರತಿಗಳ ಸಂಪಾದನೆ, ಜಾನಪದ ಸಾಹಿತ್ಯ ಸಂಗ್ರಹದಂತಹ ಕಾರ್ಯಗಳನ್ನು ಮಾಡಿ ಕನ್ನಡ ಸೇವೆ ಮಾಡಿದರು ಎಂದು ಮಂಗಳೂರು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಮೀೀನಾಕ್ಷಿ ರಾಮಚಂದ್ರ ನುಡಿದರು.
ಕನ್ನಡ ಸಾಹಿತ್ಯ ಪರಿಷತ್ ದ.ಕ. ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ಮತ್ತು ಕನ್ನಡ ಸಂಘ ಶ್ರೀರಾಮಕೃಷ್ಣ ಪದಪೂರ್ವ ಕಾಲೇಜು ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಎ.ಆರ್. ಡಿಸೋಜ ದತ್ತಿ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಕರ್ನಾಟಕದಲ್ಲಿ ಕ್ರೈಸ್ತರ ಇತಿಹಾಸ - ಕನ್ನಡ ಸಾಹಿತ್ಯಕ್ಕೆ ಕ್ರೈಸ್ತರ ಕೊಡುಗೆ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಕಿಶೋರ್ ಕುಮರ್ ರೈ ಶೇಣಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಹಿಸಿದ್ದರು.
ಕನ್ನಡ ಸಂಘದ ಸಂಯೋಜಕಿ ವಿಜೀತಾ ಸ್ವಾಗತಿಸಿದರು. ನಿತೇಶ್ ವಂದಿಸಿದರು.ನಮಿತಾ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಜಯಲಕ್ಷ್ಮಿ ಬಿ. ಶೆಟ್ಟಿ, ಕಾರ್ಯದರ್ಶಿ ದೇವಕಿ ಅಚ್ಚುತ, ಗೌರವ ಕೋಶಾಧಿಕಾರಿ ಪ್ರೊ. ಪಿ. ಕೃಷ್ಣಮೂರ್ತಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕೋಶಾಧಿಕಾರಿ ಪೂರ್ಣಿಮಾ ರಾವ್ ಪೇಜಾವರ, ಕಾಲೇಜಿನ ಕನ್ನಡ ಸಂಘದ ಅಧ್ಯಕ್ಷೆ ರುಕ್ಮಿಣಿ ಉಪಸ್ಥಿತರಿದ್ದರು.







