ಉಡುಪಿ: ನ.20ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ
ಉಡುಪಿ, ನ.15: ಉಡುಪಿ ಜಿಲ್ಲಾ ಪೊಲೀಸ್ ಘಟಕಕ್ಕೆ ಸಂಬಂಧಿಸಿದ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿ ಗಳಿಗೆ ನ.20ರಂದು ಉಡುಪಿಯ ಎಂಜಿಎಂ ಪದವಿ ಕಾಲೇಜು ಮತ್ತು ಎಂಜಿಎಂ ಪದವಿ ಪೂರ್ವ ಕಾಲೇಜು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿತ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿ ಮತ್ತು ಪ್ರವೇಶ ಪತ್ರಕ್ಕಾಗಿ ಇಲಾಖೆಯ ವೆಬ್ಸೈಟ್ www.ksp.gov.in ಅನ್ನು ಪರಿಶೀಲಿಸಬಹುದು ಎಂದು ಪೊಲೀಸ್ ಅಧೀಕ್ಷಕರ ಪ್ರಕಟನೆ ತಿಳಿಸಿದೆ.
Next Story