Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಟಿಎಂ ಸುಸಜ್ಜಿತವಾದಾಗ ಸಮಸ್ಯೆ ಪರಿಹಾರ:...

ಎಟಿಎಂ ಸುಸಜ್ಜಿತವಾದಾಗ ಸಮಸ್ಯೆ ಪರಿಹಾರ: ಎಸ್‌ಬಿಐ ಮುಖ್ಯಸ್ಥೆ

ವಾರ್ತಾಭಾರತಿವಾರ್ತಾಭಾರತಿ16 Nov 2016 12:21 AM IST
share

ಹೊಸದಿಲ್ಲಿ, ನ.15: ಹಳೆಯ ನೋಟುಗಳನ್ನು ವಿನಿಮಯ ಮಾಡಿಕೊಂಡು ಹೊಸ ನೋಟು ಪಡೆದವರಿಗೆ ಅಳಿಸಲಾಗದ ಶಾಯಿ ಬಳಸುವ ಸರಕಾರದ ಹೊಸ ನಿರ್ಧಾರದಿಂದ ಬ್ಯಾಂಕ್‌ಗಳ ಮುಂದೆ ನಿಲ್ಲುವ ಸಾಲು ಕಡಿತವಾಗಲಿದೆ ಎಂಬ ವಿಶ್ವಾಸವನ್ನು ದೇಶದ ಅತಿದೊಡ್ಡ ಬ್ಯಾಂಕ್ ಎನಿಸಿದ ಭಾರತೀಯ ಸ್ಟೇಟ್‌ಬ್ಯಾಂಕ್‌ನ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ವ್ಯಕ್ತಪಡಿಸಿದ್ದಾರೆ.

ಈಗ ಇರುವ ದೊಡ್ಡ ಸಮಸ್ಯೆ ಎಂದರೆ ಎಟಿಎಂಗಳು ಕಾರ್ಯ ನಿರ್ವಹಿಸದಿರುವುದು ಅಥವಾ ತಕ್ಷಣ ಬರಿದಾಗುತ್ತಿರುವುದು. ಎಟಿಎಂ ಯಂತ್ರಗಳನ್ನು ಸಮರೋಪಾದಿಯಲ್ಲಿ ಸಿದ್ಧಪಡಿಸಿ, ಹೊಸ ನೋಟುಗಳನ್ನು ವಿತರಿಸಲು ವ್ಯವಸ್ಥೆ ಮಾಡಬೇಕು. ಇದಕ್ಕೆ ಹಳೆಯ ನೋಟುಗಳಿಗಿಂತ ಭಿನ್ನವಾದ ಟ್ರೇಗಳು ಅಗತ್ಯ ಎಂದು ಅವರು ಹೇಳಿದರು. ಕೇಂದ್ರ ಸರಕಾರದ ದಿಢೀರ್ ನಿರ್ಧಾರದಿಂದ ದೇಶಾದ್ಯಂತ ಲಕ್ಷಾಂತರ ಮಂದಿ ಬಡವರ ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ.
ಸತತ ಆರನೇ ದಿನವೂ ಬ್ಯಾಂಕ್‌ಗಳ ಮುಂದೆ ಉದ್ದುದ್ದದ ಸರತಿ ಸಾಲುಗಳು ಕಂಡುಬಂದವು. ಇಂದು ಸರಕಾರ ಹೊಸ ಘೋಷಣೆ ಮಾಡಿ, ಚುನಾವಣೆ ಸಂದರ್ಭದಲ್ಲಿ ಬಳಸುವಂತೆ ಅಳಿಸಲಾಗದ ಶಾಯಿಯನ್ನು ಬಳಸಲು ನಿರ್ಧರಿಸುವ ನಿರ್ಧಾರವನ್ನು ಪ್ರಕಟಿಸಿದೆ. ಸಾರ್ವಜನಿಕರು ಪದೇ ಪದೇ 4,500 ರೂಪಾಯಿ ವಿನಿಮಯ ಮಾಡಿಕೊಳ್ಳುವುದನ್ನು ತಡೆಯುವ ಸಲುವಾಗಿ ನಿರ್ಧಾರ ಕೈಗೊಳ್ಳಲು ಸರಕಾರ ನಿರ್ಧರಿಸಿದೆ.
ಈ ನಿರ್ಧಾರ ಪರಿಸ್ಥಿತಿಯ ದುರುಪಯೋಗ ತಡೆಗೆ ಸಹಕಾರಿಯಾಗಲಿದೆ ಎಂದು ಭಟ್ಟಾಚಾರ್ಯ ಎನ್‌ಡಿಟಿವಿಗೆ ತಿಳಿಸಿದರು. ಹಾಲಿ ಇರುವ ಸಮಸ್ಯೆಗೆ ಏಕೈಕ ಪರಿಹಾರವೆಂದರೆ 500 ರೂಪಾಯಿ ನೋಟುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿತರಿಸುವುದು. ಇದೀಗ ಈ ನೋಟುಗಳು ಎಟಿಎಂಗೆ ಈಗಷ್ಟೇ ಹರಿಯುತ್ತಿದೆ. ಇದು ಸಾಕಷ್ಟು ಪೂರೈಕೆಯಾದರೆ ಎಟಿಎಂಗಳ ಮೂಲಕ ಪಡೆಯುವ 2,500 ರೂಪಾಯಿ ಮಿತಿ ಸಡಿಲಿಸಬಹುದು ಎಂದು ಹೇಳಿದರು.
ಈಗ ಬೇಕಾಗಿರುವುದು ಐದು ದಿನಗಳ ತಾಳ್ಮೆ. ಕೆಲ ಸಣ್ಣ ಪಟ್ಟಣಗಳಲ್ಲಿ ಸರದಿಸಾಲು ಕಡಿಮೆಯಾಗುತ್ತಿದೆ. ಅಧಿಕ ವಲಸೆ ಜನರು ಇರುವ ದೊಡ್ಡ ನಗರಗಳಲ್ಲಿ ಮಾತ್ರ ಪರಿಸ್ಥಿತಿ ಸುಧಾರಿಸಲು ಇನ್ನೂ ಕೆಲ ದಿನ ಬೇಕಾಗಬಹುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X