ಆರ್ ಎಸ್ ಎಸ್ ಮಾನನಷ್ಟ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು

ಮುಂಬೈ, ನ.16: ಆರ್ ಎಸ್ಎಸ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಭಿವಂಡಿಯ ನ್ಯಾಯಾಲಯವು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಂದು ಜಾಮೀನು ನೀಡಿದೆ.
"ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ್ದು ಆರ್ ಎಸ್ಎಸ್ "ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಇದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಆರ್ ಎಸ್ ಎಸ್ ನಾಯಕರು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ನ್ಯಾಯಾಲಯಕ್ಕೆ ಇಂದು ಹಾಜರಾದ ರಾಹುಲ್ ಗಾಂಧಿ ಅವರಿಗೆ ಭಿವಂಡಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿ, ಮುಂದಿನ ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಿತು.
Next Story





