ತೊಕ್ಕೊಟ್ಟು: ಗುಜರಿ ಅಂಗಡಿಗೆ ಬೆಂಕಿ

ಉಳ್ಳಾಲ, ನ.16: ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟುವಿನ ಒಳಪೇಟೆಯ ಗುಜರಿ ಅಂಗಡಿಯೊಂದಕ್ಕೆ ಬೆಂಕಿ ಬಿದ್ದು ಅಂಗಡಿ ಹಾನಿಯಾಗಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ತೊಕ್ಕೊಟ್ಟು ಒಳಪೇಟೆಯಲ್ಲಿರುವ ಕರ್ಣಾಟಕ ಬ್ಯಾಂಕ್ ನ ಹಿಂಬದಿಯಲ್ಲಿದ್ದ ಈ ಗುಜರಿ ಅಂಗಡಿಗೆ ಮಂಗಳವಾರ ರಾತ್ರಿ ಬೆಂಕಿ ಕಾಣಿಸಿದ್ದು, ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಂಗಡಿಯೊಳಗಿದ್ದ ಗುಜರಿ ಸಾಮಾನುಗಳು ಬೆಂಕಿಗಾಹುತಿಯಾಗಿದೆ. ಕಳೆದ ಕೆಲವು ದಿನಗಳಿಂದ ಉಳ್ಳಾಲ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ನಡೆಯುತ್ತಿದ್ದು, ಈ ಗುಜರಿ ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ.
Next Story





