Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರಗರ ಯೋಜನೆಗಳಿಗೆ ನೀತಿ: ಸಚಿವ ಪ್ರಮೋದ್...

ಕೊರಗರ ಯೋಜನೆಗಳಿಗೆ ನೀತಿ: ಸಚಿವ ಪ್ರಮೋದ್ ಭರವಸೆ

ಕೊರಗರ ಅಹೋರಾತ್ರಿ ಧರಣಿ ಸತ್ಯಾಗ್ರಹ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ16 Nov 2016 9:02 PM IST
share
ಕೊರಗರ ಯೋಜನೆಗಳಿಗೆ ನೀತಿ: ಸಚಿವ ಪ್ರಮೋದ್ ಭರವಸೆ

ಉಡುಪಿ, ನ.16: ಕೊರಗ ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಯೋಜನೆಗಳನ್ನು ನೀತಿಯನ್ನಾಗಿ ರೂಪಿಸುವ ಕುರಿತ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್‌ರ ಭರವಸೆಯ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಕೊರಗರ ಸಮಿತಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಇಂದು ಮಧ್ಯಾಹ್ನ ವೇಳೆ ಅಂತ್ಯಗೊಳಿಸಲಾಯಿತು.

ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಸಚಿವ ಪ್ರಮೋದ್ ಮಧ್ವರಾಜ್ ಧರಣಿ ನಿರತರೊಂದಿಗೆ ನೆಲದಲ್ಲಿ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದರು. ಕೊರಗ ಸಮುದಾಯದ ವಿವಿಧ ಬೇಡಿಕೆಗಳನ್ನು ಸಮಿತಿಯ ಜಿಲ್ಲಾಧ್ಯಕ್ಷ ಬೊಗ್ರ ಕೊರಗ, ಮಾಜಿ ಅಧ್ಯಕ್ಷೆ ಸುಶೀಲಾ ನಾಡ, ಮುಖಂಡರಾದ ಪುತ್ರ ಹೆಬ್ರಿ, ಸಂಜೀವ ಬಾರಕೂರು ಸಚಿವರಿಗೆ ವಿವರಿಸಿದರು.

2001ರ ಜನಗಣತಿಯಂತೆ ಜಿಲ್ಲೆಯಲ್ಲಿ 16,000ರಷ್ಟಿದ ಕೊರಗರ ಜನ ಸಂಖ್ಯೆ, 2011ರ ಜನಗಣತಿಯ ಸಂದರ್ಭದಲ್ಲಿ 11,000ಕ್ಕೆ ಇಳಿಮುಖ ಗೊಂಡಿದೆ. ಇದೇ ರೀತಿ ಮುಂದುವರೆದರೆ ಮುಂದಿನ 50ವರ್ಷಗಳಲ್ಲಿ ಇಡೀ ಸಮುದಾಯವೇ ಕಣ್ಮರೆಯಾಗಲಿದೆ. ಆದುದರಿಂದ ಡಾ.ಮುಹಮ್ಮದ್ ಪೀರ್ ವರದಿಯ ಶಿಫಾರಸ್ಸಿನಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ನೇತೃತ್ವದಲ್ಲಿ ವೈದ್ಯಕೀಯ ತಜ್ಞರು, ಮಾನವ ಶಾಸ್ತ್ರಜ್ಞರು, ಸಮಾಜಶಾಸ್ತ್ರಜ್ಞರು, ಮನ ಶಾಸ್ತ್ರಜ್ಞರನ್ನೊಳಗೊಂಡ ತಂಡವನ್ನು ರಚಿಸಿ ಸಮಗ್ರ ಆರೋಗ್ಯ ಅಧ್ಯಯನ ನಡೆಸಿ ಪರಿಹಾರ ಕಂಡು ಕೊಳ್ಳಬೇಕು ಎಂದು ಕೊರಗ ಮುಖಂಡರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸದ್ಯದಲ್ಲೇ ಕೊರಗರ ಜನಸಂಖ್ಯೆ ಇಳಿಮುಖ, ಆರೋಗ್ಯ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಲು ಕ್ರಮ ತೆಗೆದುಕೊಳ್ಳಲಾಗುವುದು. ಜನಸಂಖ್ಯೆಗೆ ಸಂಬಂಧಿಸಿದಂತೆ ಕೇರಳ ಸರಕಾರ ನಡೆಸಿರುವ ಅಧ್ಯಯನದ ವರದಿಯನ್ನು ತರಿಸಿ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು. ಸದ್ಯಕ್ಕೆ ಪರಿಶಿಷ್ಟ ವರ್ಗದಲ್ಲಿ ಕೊರಗರಿಗೆ ಮೀಸಲಾತಿ ನೀಡುತ್ತಿರುವುದ ದ ಸಾಕಷ್ಟು ಅನ್ಯಾಯ ಆಗುತ್ತಿದೆ. ಹೀಗಾಗಿ ಅವರಿಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗುವುದು. ಕೊರಗ ಸಮುದಾಯಕ್ಕೆ ಯಾವುದೇ ದಾಖಲೆಗಳಿಲ್ಲದೆ ಮನೆ ಮಂಜೂರು ಮಾಡ ಲಾಗುವುದು. ಮನೆ ನಿರ್ಮಾಣಕ್ಕೆ ನೀಡುವ ಮೊತ್ತವನ್ನು 4.5ಲಕ್ಷ ರೂ.ಗೆ ಏರಿಸಲಾಗುವುದು ಎಂದು ಅವರು ಹೇಳಿದರು.

ಕೊರಗ ಸಮುದಾಯದ ಪ್ರತಿಯೊಬ್ಬ ಸದಸ್ಯರ ಸಮಗ್ರ ಆರೋಗ್ಯ ತಪಾಸಣೆ ನಡೆಸಿ ದಾಖಲಾತಿ ಮಾಡಿ ಅದರಂತೆ ಚಿಕಿತ್ಸೆ ಮುಂದುವರೆಸುವುದು ಸೇರಿದಂತೆ ಎಲ್ಲ ರೀತಿಯ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಕೊರಗರು ತಮ್ಮ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಹರೀಶ್ ಗಾಂವ್ಕರ್, ವ್ಯವಸ್ಥಾಪಕ ವಿಶ್ವನಾಥ್ ಉಪಸ್ಥಿತರಿದ್ದರು. 

ಬೆಳಗಾವಿ ಅಧಿವೇಶನದಲ್ಲಿ ಕೊರಗ ಸಭೆ

ಬೆಳಗಾವಿ ಅಧಿವೇಶನದ ಸಮಯದಲ್ಲಿ ಕೊರಗ ಆರೋಗ್ಯ ಶಿಕ್ಷಣ ಸಮಸ್ಯೆ ಹಾಗೂ ಸಮುದಾಯದ ಅಭಿವೃದ್ಧಿ ಕುರಿತು ಸಮಾಜ ಕಲ್ಯಾಣ ಸಚಿವ ಆಂಜನೇಯ ಅಧ್ಯಕ್ಷತೆಯಲ್ಲಿ ಸಭೆ ಕರೆದು ಚರ್ಚಿಸಲಾಗುವುದು. ಇದರಲ್ಲಿ ಆರೋಗ್ಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿ, ಜಿಪಂ ಸಿಇಓ, ಇತರ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಕೊರಗ ಮುಖಂಡರನ್ನು ಕರೆಯಲಾಗುವುದು ಎಂದು ಸಚಿವ ಪ್ರಮೋದ್ ಮಧ್ವರಾಜ್ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X