ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಿದ್ದನ್ನು ಪ್ರಶ್ನಿಸಿದ್ದೇ ತಪ್ಪಾಯಿತು..

ಉಡುಪಿ, ನ.16: ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದುತ್ತಿರುವುದನ್ನು ಪ್ರಶ್ನಿಸಿದ್ದಕ್ಕಾಗಿ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನ.15ರಂದು ಸಂಜೆ ವೇಳೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹಲ್ಲೆಗೆ ಒಳಗಾದ ತೆಂಕನಿಡಿಯೂರು ಗ್ರಾಮದ ಈಶ್ವರ ನಗರದ ನಿವಾಸಿ ರತ್ನಾಕರ(45) ಎಂಬವರು ಮಣಿಪಾಲ ಆಸ್ಪತ್ರೆಯ ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಮಣಿಪಾಲ ಕಡೆಗೆ ಹೋಗುವ ಬಸ್ ನಿಲ್ದಾಣ ದಲ್ಲಿ ನಿಂತುಕೊಂಡಿದ್ದ ವೇಳೆ ಮೂಡುಬೆಳ್ಳೆ ಕಡೆಗೆ ಹೋಗುವ ಬಸ್ಸಿನ ಕ್ಲೀನರ್ ಕೈಯಲ್ಲಿ ಸಿಗರೇಟ್ ಹಿಡಿದುಕೊಂಡು ಸೇದುತ್ತಿದ್ದನು. ಈ ಬಗ್ಗೆ ಆತನಲ್ಲಿ ರತ್ನಾಕರ ಪ್ರಶ್ನಿಸಿದರು. ಇದರಿಂದ ಕೋಪಗೊಂಡ ಆತ ರತ್ನಾಕರ್ ಅವರನ್ನು ದೂಡಿ ಹಾಕಿ ಚಾಕುವಿನಿಂದ ಹೊಟ್ಟೆ ಹಾಗೂ ಸೊಂಟಕ್ಕೆ ತಿವಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story





