Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆಲೆಸ್ತೀನ್ ಕುರಿತ ಕಾರ್ಕಳ ಯುವತಿಯ...

ಫೆಲೆಸ್ತೀನ್ ಕುರಿತ ಕಾರ್ಕಳ ಯುವತಿಯ ಕಲೆಗೆ ಅಮೇರಿಕಾದಲ್ಲಿ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ17 Nov 2016 4:12 PM IST
share
ಫೆಲೆಸ್ತೀನ್ ಕುರಿತ ಕಾರ್ಕಳ ಯುವತಿಯ ಕಲೆಗೆ ಅಮೇರಿಕಾದಲ್ಲಿ ಪ್ರಶಸ್ತಿ

ಉಡುಪಿ,ನ.17: ಕತಾರ್ ವಿವಿಯಲ್ಲಿ ಗಲ್ಫ್ ಸ್ಟಡೀಸ್‌ನಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುತ್ತಿರುವ ಕಾರ್ಕಳ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿನಿ ವಫಾ ಸುಲ್ತಾನಾ ಫೆಲೆಸ್ತೀನ್ ಕುರಿತ ತನ್ನ ಕಲಾಕೃತಿಗಾಗಿ ಅಂತಾರಾಷ್ಟ್ರೀಯ ಗೌರವಕ್ಕೆ ಪಾತ್ರ ರಾಗಿದ್ದಾರೆ

ಕಾರ್ಕಳ ತಾಲೂಕಿನ ಮೊಹಿದೀನ್ ಮತ್ತು ಹುಮೈರಾ ದಂಪತಿಗಳ ಪುತ್ರಿಯಾಗಿರುವ ವಫಾ ಸುಲ್ತಾನಾ ಅಮರಿಕದ ಟೆಕ್ಸಾಸ್‌ನ ಹ್ಯೂಸ್ಟನ್‌ನಲ್ಲಿರುವ ಫೆಲೆಸ್ತೀನ್ ಅಮೆರಿಕನ್ ಸಾಂಸ್ಕೃತಿಕ ಕೇಂದ್ರ(ಪಿಎಸಿಸಿ)ವು ಆಯೋಜಿಸಿದ್ದ ಅಂತಾರಾಷ್ಟ್ರೀಯ ಪೋಸ್ಟರ್ ರಚನೆ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

ಪಿಎಸಿಸಿ ಫೆಲೆಸ್ತೀನ್‌ನ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಸಾಂಸ್ಕೃತಿಕ ಮತ್ತು ಮಾನವೀಯ ಕಾರ್ಯಕ್ರಮಗಳನ್ನು ಉತ್ತೇಜಿಸುತ್ತಿದೆ. ಪೋಸ್ಟರ್ ರಚನೆ ಸ್ಪರ್ಧೆಗಾಗಿ ಫೆಲೆಸ್ತೀನಿ ಜನರು ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಕಲಾಕೃತಿಗಳ ಸೃಷ್ಟಿಗಾಗಿ ಅದು ಕಲಾವಿದರನ್ನು ಆಹ್ವಾನಿಸುತ್ತದೆ.

 ನನ್ನ ಹಲವರು ಹವ್ಯಾಸಗಳಲ್ಲಿ ಕಲೆ ನನಗೆ ತುಂಬ ಇಷ್ಟವಾದದ್ದು. ಕಾಲೇಜಿಗೆ ಸೇರುವವರೆಗೂ ನನ್ನಲ್ಲಿ ಜನ್ಮದತ್ತ ಕಲಾವಿದೆ ಇದ್ದಾಳೆ ಎನ್ನುವುದು ನನಗೆ ಗೊತ್ತೇ ಇರಲಿಲ್ಲ. ಅಲ್ಲಿ ಯಾವುದೇ ಕಾರ್ಯಕ್ರಮದ ಪೋಸ್ಟರ್ ರಚನೆಗೆ ಸಂಘಟಕರು ನನ್ನನ್ನೇ ಹುಡುಕಿಕೊಂಡು ಬರುತ್ತಿದ್ದರು ಎಂದು ಮಂಗಳೂರಿನ ಎಸ್‌ಡಿಎಂ ಲಾ ಕಾಲೇಜಿನ ಹಳೆಯ ವಿದ್ಯಾರ್ಥಿನಿಯಾಗಿರುವ ವಫಾ ಸುಲ್ತಾನಾ ನೆನಪಿಸಿಕೊಂಡರು.

ಕಾಲೇಜಿನಲ್ಲೊಮ್ಮೆ ಆಯೋಜಿಸಲಾಗಿದ್ದ ರಾಜಕೀಯ ಕಾರ್ಟೂನ್ ಸ್ಪರ್ಧೆಯಲ್ಲಿ ಪ್ರಶಸ್ತಿ ಬಾಚಿಕೊಂಡ ಬಳಿಕ ಅವರು ಆ ರಂಗದಲ್ಲಿ ಹೆಚ್ಚಿನ ಆಸಕ್ತಿ ತೋರಿಸಿದ್ದರು. ತನ್ನ ರಾಜಕೀಯ ಕಾರ್ಟೂನುಗಳಿಗಾಗಿ ಅವರು ರಾಜ್ಯಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ವಿವಿಧ ಭಾಷೆಗಳು,ಸಂಸ್ಕೃತಿ,ಆಹಾರ,ಧರ್ಮಗಳು ಮತ್ತು ಜನರ ಬಗ್ಗೆ ನನಗೆ ವಿಶೇಷ ಆಸಕ್ತಿಯಿದೆ. ಫೆಲೆಸ್ತೀನ್ ಎಂದರೆ ಸಂಕಷ್ಟದಲ್ಲಿರುವ ರಾಷ್ಟ್ರ ಎನ್ನುವುದೊಂದೇ ನನಗೆ ಗೊತ್ತಿತ್ತು. ಆದರೆ ಈ ಸ್ಪರ್ಧೆಯಿಂದಾಗಿ ನಾನು ಫೆಲೆಸ್ತೀನ್‌ನ ‘ರಾಜಕೀಯ ’ದ ಆಚೆಗೂ ನೋಡುವಂತಾಯಿತು. ಫೆಲೆಸ್ತೀನ್ ಸಂಸ್ಕೃತಿಯನ್ನು ಬಿಂಬಿಸುವ ಕಲೆಯನ್ನು ರಚಿಸಲು ಅವರ ಆಹಾರ,ಭಾಷೆಗಳು,ಧರ್ಮಗಳು,ಸಾಹಿತ್ಯ,ಸಂಗೀತ,ಉಡುಗೆ ಇವೆಲ್ಲವುಗಳ ಬಗ್ಗೆ ನಾನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವುದು ಅಗತ್ಯವಾಗಿತ್ತು ಎಂದು ವಫಾ ಸುಲ್ತಾನಾ ಹೇಳಿದರು.

ಅವರ ಪತಿ ಶೇಖ್ ಅಫ್ಝಲ್ ಕತಾರ್‌ನಲ್ಲಿ ಎನ್ನಾರೈ ಟಿಕ್ಕಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X