ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಬಂಟ್ವಾಳ, ನ.17: ಎಸ್ಕೆಎಸ್ಸೆಸ್ಸೆಫ್ ಕುಕ್ಕಾಜೆ ಯುನಿಟ್ ವತಿಯಿಂದ ಕುಕ್ಕಾಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವುದು ಹೇಗೆ? ತರಬೇತಿ ಕಾರ್ಯಾಗಾರವು ನಡೆಯಿತು. ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸಲಹೆಗಾರ ರಫೀಕ್ ಮಾಸ್ಟರ್ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಕೆಎಸ್ಸೆಸ್ಸೆಫ್ ಕುಕ್ಕಾಜೆ ಯುನಿಟ್‌ನ ಅಧ್ಯಕ್ಷ ಹಂಝ ಕುರಿಯಪಾಡಿ, ಕೋಶಾಧಿಕಾರಿ ಅಬ್ದುಲ್ ಅಝೀಝ್ ನಾಡಾಜೆ, ಸದಸ್ಯ ಹಾರಿಸ್, ಶಾಲಾ ಸಹಶಿಕ್ಷಕ ಶಿವಕುಮಾರ್ ಉಪಸ್ಥಿತರಿದ್ದರು. ಎಸ್ಕೆಎಸ್ಸೆಸ್ಸೆಫ್ ಕುಕ್ಕಾಜೆ ಯುನಿಟ್‌ನ ಪ್ರಧಾನ ಕಾರ್ಯದರ್ಶಿ ರಫೀಕ್ ಮುಸ್ಲಿಯಾರ್ ಕಡಂಬು ಮತ್ತು ಟಿಆರ್‌ಎಫ್ ಪ್ರಧಾನ ಕಾರ್ಯದರ್ಶಿ ಡಿ.ಅಬ್ದುಲ್ ಹಮೀದ್ ಕಣ್ಣೂರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಾಲಾ ಮುಖ್ಯ ಶಿಕ್ಷಕಿ ವಾಯ್ಲೆಟ್ ಲೆನ್ನಿ ಡಯಾಸ್ ಸ್ವಾಗತಿಸಿದರು.
Next Story





