ಆಳ್ವಾಸ್ ಕೃಷಿಸಿರಿ ಉದ್ಘಾಟನೆ ಕೃಷಿಯ ಪರಿಷ್ಕರಣೆಯಿಂದ ರೈತರ ಪ್ರಗತಿ: ಅಭಯಚಂದ್ರ ಜೈನ್

ಮೂಡುಬಿದಿರೆ, ನ.17: ಕೃಷಿ ನಮ್ಮ ಮೂಲ ಬೇರು. ಇಂದು ಕೃಷಿಯನ್ನು ಮಾಡುವ ರೈತರ ಸಂಖ್ಯೆ ಕಡಿಮೆಯಾಗುತಿದೆ. ಸಾಂಪ್ರಾದಾಯಿಕ ಬೆಳೆ ತೆಗೆಯುವ ಕಾಲದಲ್ಲಿ ಕೃಷಿ ಕಷ್ಟ ಇತ್ತು. ಆದರೆ ಇಂದು ಸರಕಾರವೇ ಬಾಡಿಗೆಗೆ ಯಂತ್ರೋಪಕರಣಗಳನ್ನು ನೀಡುವ ಮೂಲಕ ಕೃಷಿಯ ಕೆಲಸವನ್ನು ಸುಲಭವಾಗಿಸಿದೆ. ಕೃಷಿಯಲ್ಲಿ ಪರಿಷ್ಕರಣೆ ಮಾಡಿಕೊಂಡಾಗ ರೈತರ ಪ್ರಗತಿ ಸಾಧ್ಯ ಎಂದು ಕ್ಷೇತ್ರದ ಶಾಸಕ, ಮಾಜಿ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.
ಅವರು ಕರ್ನಾಟಕ ನಾಳೆಗಳ ನಿರ್ಮಣ ಎಂಬ ಪರಿಕಲ್ಪನೆಯಲ್ಲಿ ಮೂರು ದಿನಗಳ ಕಾಲ ಮೂಡುಬಿದಿರೆಯಲ್ಲಿ ನಡೆಯುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ-2016ಕ್ಕೆ ಪೂರಕವಾಗಿ ಮೂಡುಬಿದಿರೆಯ ಕೃಷಿ ವಿಚಾರ ವಿನಿಮಯ ಕೇಂದ್ರ, ಜಿಲ್ಲಾ ಕೃಷಿಕ ಸಮಾಜ ಮಂಗಳೂರು, ಕರ್ನಾಟಕ ರಾಜ್ಯ ರೈತ ಸಂಘ ಮೂಡುಬಿದಿರೆ ಮತ್ತು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯ ಶಿರ್ತಾಡಿ ಧರ್ಮಸಾಮ್ರಾಜ್ಯ ಕೃಷಿ ಆವರಣದ ಮಿಜಾರು ಅಣ್ಣಪ್ಪ ವೇದಿಕೆಯಲ್ಲಿ ನಡೆದ ಆಳ್ವಾಸ್ ಕೃಷಿಸಿರಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮಿಜಾರುಗುತ್ತು ಆನಂದ ಆಳ್ವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್. ಮುಂಜುನಾಥ್, ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದರು.
ಮೂಡುಬಿದಿರೆಯ ಹಿರಿಯ ಕೃಷಿ ತಜ್ಞ ಡಾ.ಎಲ್.ಸಿ ಸೋನ್ಸ್, ಮಂಗಳೂರು ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ, ಕೃಷಿ ಇಲಾಖೆಯ ಸಹನಿರ್ದೇಶಕ ಕೆಂಪೇಗೌಡ, ಬೀದರ್ ಪಶು ಮತ್ತು ಮೀನುಗಾರಿಕಾ ವಿವಿಯ ವಿಸ್ತರಣಾ ನಿರ್ದೇಶಕ ಡಾ.ಶಿವಪ್ರಕಾಶ್ ಎಸ್.ಎಂ., ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಸಂಶೋಧನ ನಿರ್ದೇಶಕ ಡಾ.ಹನುಮಂತಪ್ಪ, ಮಂಗಳೂರು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಯೊಗೀಶ್ ಎಚ್.ಆರ್., ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ.ಶಿವಕುಮಾರ್ ಮಗದ, ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಆರ್. ಸುಬ್ರಹ್ಮಣ್ಯ, ವಲಯ ರೈತ ಸಂಘದ ಅಧ್ಯಕ್ಷ ಎಚ್. ಧನಕೀರ್ತಿ ಬಲಿಪ ಉಪಸ್ಥಿತರಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಡಾರು ಗುಣಪಾಲ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ ವಂದಿಸಿದರು.







