ಲಾರಿ-ಬೈಕ್ ಢಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು
ಹೊನ್ನಾವರ, ನ.17: ತಾಲೂಕಿನ ಕಾಸರಕೋಡ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮತ್ತು ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾನೆ.
ಹಳದೀಪುರದ ಹೊರಭಾಗದ ಮಹೇಶ ದುರ್ಗ ಹರಿಕಾಂತ(27) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ.
ಬೈಕ್ ಸವಾರ ಹೊನ್ನಾವರ ಕಡೆಯಿಂದ ಮುರ್ಡೇಶ್ವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬಂದ ಲಾರಿ ಢಿಕ್ಕಿಯಾಗಿ ತಲೆ, ಕೈ, ಕಾಲುಗಳಿಗೆ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





