ಇಂದಿನಿಂದ ಸಚಿವ ಖಾದರ್ ಜಿಲ್ಲಾ ಪ್ರವಾಸ
ಮಂಗಳೂರು, ನ.17: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ನವೆಂಬರ್ 18 ಮತ್ತು 19ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ.18ರಂದು ಬೆಳಗ್ಗೆ 9:30ಕ್ಕೆ ಸರ್ಕ್ಯೂಟ್ ಹೌಸ್‌ನಲ್ಲಿ ಸಾರ್ವಜನಿಕರ ಭೇಟಿ. 10 ಗಂಟೆಗೆ ನೆಹರೂ ಮೈದಾನದಲ್ಲಿ 63ನೆ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನ.19ರಂದು ಪೂರ್ವಾಹ್ನ 11ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿ ಉದ್ಘಾಟನಾ ಕಾರ್ಯಕ್ರಮ, ಅಪರಾಹ್ನ 2 ಗಂಟೆಗೆ ನೆಹರೂ ಮೈದಾನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 100ನೆ ಜಯಂತಿ ಕಾರ್ಯಕ್ರಮ, ರಾತ್ರಿ 8 ಗಂಟೆಗೆ ಸೌಹಾರ್ದ ಯುವಕ ಮಂಡಲದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





