ಅಪಘಾತ: ಬೈಕ್ ಸವಾರ ಮೃತ್ಯು
ಬ್ರಹ್ಮಾವರ, ನ.17: ಇಲ್ಲಿನ ಕೃಷ್ಣ ಟೈಲ್ಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಜೆ ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೈಕ್ ಸವಾರ ಶರ್ಫುಲ್ಲಾ(48) ಎಂದು ಗುರುತಿಸಲಾಗಿದೆ. ಬ್ರಹ್ಮಾವರ ಕಡೆಯಿಂದ ಉಪ್ಪಿನಕೋಟೆ ಕಡೆಗೆ ಹೋಗುತ್ತಿದ್ದ ಬೈಕ್ ಎದುರಿನಿಂದ ಹೋಗುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸವಾರ ಶರ್ಫುಲ್ಲಾ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





