ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ : ಸಚಿವ ಪ್ರಮೋದ್
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟne

ಉಡುಪಿ, ನ.18: ಐಎಎಸ್, ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಪುಸ್ತಕ, ಮಾಹಿತಿಗಳ ಕೊರತೆಯಿಂದಾಗಿ ಜಿಲ್ಲೆಯ ವಿದ್ಯಾರ್ಥಿ ಗಳು ಹಿಂದುಳಿದಿದ್ದಾರೆ. ಈ ನಿಟ್ಟಿನಲ್ಲಿ ಅಜ್ಜರಕಾಡು ಪುರಭವನದ ಬಳಿ ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೈಟೆಕ್ ಲೈಬ್ರೇರಿಯನ್ನು ನಿರ್ಮಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ವಿಬಾಗವನ್ನು ತೆರೆಯ ಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಉಡುಪಿ ಬೋರ್ಡ್ ಹೈಸ್ಕೂಲ್ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತಿ ದ್ದರು. ಹೆಟೈಕ್ ಲೈಬ್ರೇರಿ ನಿರ್ಮಾಣಕ್ಕೆ ಈಗಾಗಲೇ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಿಂದ 1ಕೋ.ರೂ.ಮಂಜೂರಾಗಿದ್ದು, ರಾಜ್ಯಸಬೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಒಂದು ಕೋ.ರೂ.ನೀಡುವ ಭರವಸೆ ನೀಡಿದ್ದಾರೆ. ಉಳಿದ 3ಕೋ.ರೂ.ಅನುದಾನವನ್ನು ರಾಜ್ಯ ಸರಕಾರದಿಂದ ಮಂಜೂರು ಮಾಡಲು ಪ್ರಯತ್ನಿಸಲಾಗುವುದು ಎಂದರು.
ರಾಜ್ಯ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್‌ಕುಮಾರ್ ಎಸ್. ಹೊಸಮನಿ ಮಾತನಾಡಿ, ಗ್ರಂಥಾಲಯಗಳಿಗೆ ಓದುಗರನ್ನು ಆಕರ್ಷಿ ಸುವ ನಿಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗಿದೆ. ಗ್ರಂಥಾಲಯದ ಸಿಬ್ಬಂದಿಗಳಲ್ಲಿ ಇನ್ನಷ್ಟು ಸೇವಾಪರತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ನ.20ರಂದು ದಾವಣಗೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಗ್ರಂಥಾಲಯದ 67 ಮಂದಿ ಸಿಬ್ಬಂದಿ ಗಳಿಗೆ ಈ ಬಾರಿಯ ಗ್ರಂಥಾಲಯ ಸೇವಾ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.
ಅತ್ಯುತ್ತಮ ಸೇವೆ ಸಲ್ಲಿಸಿದ ನಗರಕೇಂದ್ರ ಗ್ರಂಥಾಲಯದ ಪ್ರೇಮ ಎಂ. ಹಾಗೂ ಜಿಲ್ಲಾಕೇಂದ್ರ ಗ್ರಂಥಾಲಯದ ಶಕುಂತಳ ಕುಂದರ್ ಅವರಿಗೆ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅತೀ ಹೆಚ್ಚು ಸದಸ್ಯರನ್ನು ನೋಂದಾ ಯಿಸಿದ ಗ್ರಾಪಂ ಗ್ರಂಥಾಲಯದ ಮೇಲ್ವಿಚಾರರಾದ ರತ್ನಾವತಿ ಹಾರಾಡಿ, ಸುಧಾ ಪಡುವರಿ, ಶಶಿಕಲಾ ಬೆಳ್ಮಣ್ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸ ಲಾಯಿತು. ಅತೀ ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಹೆಬ್ರಿ ಸರಕಾರಿ ಪಿಯು ಕಾಲೇಜನ್ನು ಅಭಿನಂದಿಸಲಾಯಿತು.
ಜಿಪಂ ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಬೆಂಗಳೂರು ಗ್ರಂಥಾಲಯದ ಉಪ ನಿರ್ದೇಶಕ ವೆಂಕಟೇಶ್ ಸಿ.ಜೆ., ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ನರಸಿಂಹಮೂರ್ತಿ, ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಜಗದೀಶ ರಾವ್, ವುಲ್ಪೆರಾಘವೇಂದ್ರ ಉಪಸ್ಥಿತರಿದ್ದರು.
ಜಿಲ್ಲಾ ಹಾಗೂ ನಗರಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾ ಧಿಕಾರಿ ನಳಿನಿ ಜಿ.ಐ. ಸ್ವಾಗತಿಸಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಶಕುಂತಳ ಕುಂದರ್ ವಂದಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಪುಸ್ತಕ ಪ್ರದರ್ಶನವನ್ನು ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಉದ್ಘಾಟಿಸಿದರು. ಇದೇ ಸಂದರ್ದಲ್ಲಿ ನಡೆದ ಓದಿನೆಡೆಗೆ ನಮ್ಮ ನಡೆ ವಿದ್ಯಾರ್ಥಿಗಳ ಜಾಥಾಕ್ಕೆ ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಚಾಲನೆ ನೀಡಿದರು.







