ಆರ್‌ಎಸ್‌ಎಸ್ ಹಿರಿಯ ಪ್ರಚಾರಕ ಸೂರ್ಯನಾರಾಯಣ ರಾವ್ ನಿಧನ

ಬೆಂಗಳೂರು, ನ.19: ಆರ್‍ಎಸ್‍ಎಸ್‍ನ ಹಿರಿಯ ಪ್ರಚಾರಕ ಕೃ. ಸೂರ್ಯನಾರಾಯಣ ರಾವ್ ( 93 ) ಅವರು ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನರಾದರು.
70 ವರ್ಷಗಳ ಕಾಲ ಆರ್‍ಎಸ್‍ಎಸ್‍ನಲ್ಲಿ ಪ್ರಚಾರಕರಾಗಿ ಗುರುತಿಸಿಕೊಂಡಿದ್ದ ಸೂರ್ಯನಾರಾಯಣ ಅವರನ್ನು ಅಸೌಖ್ಯದ ಕಾರಣದಿಂದ ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು..
ಸೂರ್ಯನಾರಾಯಣ ರಾವ್ ನಿಧನಕ್ಕೆ ಪ್ರಧಾನಿ ಮೋದಿ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
Next Story





