ಬಿರ್ಕು ನಿಧನ
ಬೆಳ್ತಂಗಡಿ, ನ.19: ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಸದಸ್ಯ, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಘಟನಾ ಸಂಚಾಲಕ ಸದಸ್ಯ ಚಂದು ಎಲ್. ರವರ ತಾಯಿ, ಲಾಲ ಗ್ರಾಮದ ನಿನ್ನಿಕಲ್ಲು ನಿವಾಸಿ ದಿ. ಕೂಸ ಮೇಸ್ತ್ರಿಯವರ ಪತ್ನಿ ಬಿರ್ಕು(70) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಮೃತರು ಪುತ್ರ ಚಂದು ಎಲ್. ಲಾಲ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಳದಂಗಡಿ ಕ್ಷೇತ್ರದ ಜಿಪಂ ಸದಸ್ಯ ಶೇಖರ ಕುಕ್ಕೇಡಿ, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಕಾಂಗ್ರೆಸ್ ಎಸ್ಸಿ ಮೋರ್ಚಾದ ಅಧ್ಯಕ್ಷ ವಸಂತ ಬಿ.ಕೆ., ಡಿಎಸ್‌ಎಸ್ ಜಿಲ್ಲಾ ಸಂಚಾಲಕ ರೋಹಿತಾಕ್ಷ, ತಾಲೂಕು ಸಂಚಾಲಕ ವೆಂಕಣ್ಣ ಕೊಯ್ಯೂರು ಮೃತರ ಅಂತಿಮ ದರ್ಶನ ಪಡೆದರು.
Next Story





