Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ತಿನ ಸಿಬ್ಬಂದಿಗೆ ನಗದು ರೂಪದಲ್ಲಿ...

ಸಂಸತ್ತಿನ ಸಿಬ್ಬಂದಿಗೆ ನಗದು ರೂಪದಲ್ಲಿ ಸಂಬಳ ಕೊಡಲು ಮುಂದಾದ ಸರ್ಕಾರ

ಶಾಸ್ತ್ರ ಹೇಳಿ ಗಾಳ ಇಕ್ಕಿದ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ20 Nov 2016 9:26 AM IST
share
ಸಂಸತ್ತಿನ ಸಿಬ್ಬಂದಿಗೆ ನಗದು ರೂಪದಲ್ಲಿ ಸಂಬಳ ಕೊಡಲು ಮುಂದಾದ ಸರ್ಕಾರ

* 5 ಕೋಟಿ ನಗದಿಗೆ ಬ್ಯಾಂಕ್‌ಗೆ ಬೇಡಿಕೆ
* ಜನರಿಗೆ ಗರಿಷ್ಠ ನಗದು ಮಿತಿ 50 ಸಾವಿರ!

ಹೊಸದಿಲ್ಲಿ, ನ.20: ಲೋಕಸಭೆ ಹಾಗೂ ರಾಜ್ಯಸಭಾ ಕಚೇರಿ ಭಾರತೀಯ ಸ್ಟೇಟ್ ಬ್ಯಾಂಕಿನ ಸಂಸತ್ ಭವನ ಶಾಖೆಗೆ ನವೆಂಬರ್ 21ರೊಳಗೆ 5 ಕೋಟಿ ರೂಪಾಯಿ ನಗದು ನೀಡುವಂತೆ ಕೋರಿದೆ. ಸಿಬ್ಬಂದಿಗೆ ಮುಂಗಡ ಸಂಬಳ ನೀಡುವ ಸಲುವಾಗಿ ಈ ಮನವಿ ಮಾಡಲಾಗಿದ್ದು, ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಧೀರ್ ಮಲ್ಹೋತ್ರಾ ಈ ಬಗ್ಗೆ ಆರ್‌ಬಿಐ ಮಾರ್ಗದರ್ಶನ ಕೋರಿದ್ದಾರೆ.
ಇದನ್ನು ಮಲ್ಹೋತ್ರಾ ಖಚಿತಪಡಿಸಿದ್ದಾರೆ. "ಶುಕ್ರವಾರ ಈ ಮನವಿ ಸಲ್ಲಿಸಲಾಗಿದೆ. ಸಿಬ್ಬಂದಿಗೆ ತಲಾ 10 ಸಾವಿರ ರೂಪಾಯಿಯನ್ನು ನಗದು ರೂಪದಲ್ಲಿ ನೀಡಲು ನವೆಂಬರ್ 21ರೊಳಗೆ ಈ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ. ಈ ಮನವಿಯನ್ನು ಹಿರಿಯ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದು, ಅವರು ಆರ್‌ಬಿಐ ನಿರ್ದೇಶನಕ್ಕಾಗಿ ಕೋರಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.
ಉಳಿತಾಯ ಖಾತೆದಾರರಿಗೆ 24 ಸಾವಿರ ಹಾಗೂ ಚಾಲ್ತಿಖಾತೆದಾರರಿಗೆ 50 ಸಾವಿರ ಪಾವತಿಸಲು ಮಾತ್ರ ಅವಕಾಶವಿದೆ ಎಂದು ಅವರು ಹೇಳಿದ್ದಾರೆ. ಸಾಮಾನ್ಯವಾಗಿ ಸಂಸತ್ ಭವನದ ಸಿಬ್ಬಂದಿಯ ಖಾತೆಗೆ ನೇರವಾಗಿ ವೇತನ ಪಾವತಿಯಾಗುತ್ತದೆ. ಸುಮಾರು 4 ಸಾವಿರ ಮಂದಿ ವೇತನ ಖಾತೆಯನ್ನು ಈ ಶಾಖೆಯಲ್ಲಿ ಹೊಂದಿದ್ದಾರೆ.
"ಜನರಿಗೆ ಆಗುತ್ತಿರುವ ತೊಂದರೆ ತಮ್ಮ ಸಿಬ್ಬಂದಿಗೆ ಆಗಬಾರದು ಎಂಬ ಕಾರಣಕ್ಕೆ ಬಹುಶಃ ಅಧಿಕಾರಿಗಳು ಈ ಮನವಿ ಮಾಡಿರಬೇಕು" ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಹೇಳಿದರು. ಸರ್ಕಾರ ವಾಸ್ತವವಾಗಿ ನಗದುರಹಿತ ವಹಿವಾಟು ಉತ್ತೇಜಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಎಲ್ಲಕ್ಕಿಂತ ಹೆಚ್ಚಾಗಿ ಒಂದೇ ಶಾಖೆಯಿಂದ ಐದು ಕೋಟಿ ರೂಪಾಯಿ ನಗದು ಪಾವತಿಯನ್ನು ಸಮರ್ಥಿಸಿಕೊಳ್ಳುವುದು ಕಷ್ಟ ಎಂದು ಹೇಳಿದ್ದಾರೆ. ಅಂತಿಮ ನಿರ್ಧಾರ ಆರ್‌ಬಿಐನದ್ದು ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಡೆಯನ್ನು ಲೋಕಸಭಾ ಕಚೇರಿಯ ವಕ್ತಾರರೂ ಖಚಿತಪಡಿಸಿದ್ದು, ನಾನ್ ಗಜೆಟೆಡ್ ಅಧಿಕಾರಿಗಳಿಗೆ ನಗದು ರೂಪದಲ್ಲಿ ಮುಂಗಡ ವೇತನ ನೀಡುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಿಂದ ಬಂದ ಮನವಿ ಹಿನ್ನೆಲೆಯಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದರು. ಆದರೆ 179 ಮಂದಿ ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿದ್ದು, ಇದಕ್ಕೆ 1.8 ಕೋಟಿ ಸಾಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X