Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 18ರ ಯುವತಿಯ ತಂದೆಯನ್ನು ಗುದ್ದಿ ಸಾಯಿಸಿದ...

18ರ ಯುವತಿಯ ತಂದೆಯನ್ನು ಗುದ್ದಿ ಸಾಯಿಸಿದ ಬೀದಿಕಾಮಣ್ಣ

ವಾರ್ತಾಭಾರತಿವಾರ್ತಾಭಾರತಿ20 Nov 2016 3:21 PM IST
share
18ರ ಯುವತಿಯ ತಂದೆಯನ್ನು ಗುದ್ದಿ ಸಾಯಿಸಿದ ಬೀದಿಕಾಮಣ್ಣ

ಮುಂಬೈ,ನ.20: ಪನವೇಲ್‌ನ ಕಾಲೇಜೊಂದರ ವಿದ್ಯಾರ್ಥಿನಿಯಾಗಿರುವ ತನ್ನ 18ರ ಹರೆಯದ ಪುತ್ರಿಯನ್ನು ಕಳೆದೊಂದು ವರ್ಷದಿಂದಲೂ ಹಿಂಬಾಲಿಸುತ್ತ ಚುಡಾಯಿಸುತ್ತಿದ್ದ ಬೀದಿಕಾಮಣ್ಣನನ್ನು ಪ್ರಶ್ನಿಸಿದ ತಪ್ಪಿಗೆ 53ರ ಹರೆಯದ ವ್ಯಕ್ತಿಯೋರ್ವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ನಾಲ್ಕು ದಿನಗಳ ಹಿಂದೆ ಆತನಿಂದ ಹೊಡೆತ ತಿಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಮಿದುಳು ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ.

 ನ.14ರಂದು ರಾಯಗಡ ಜಿಲ್ಲೆಯ ಪೊಯ್ನಡ್ ಪಟ್ಟಣದ ಜನನಿಬಿಡ ರಸ್ತೆಯಲ್ಲಿ ತನ್ನ ನೆರೆಮನೆಯ ನಿವಾಸಿಯಾಗಿರುವ ಅವಿಷೇಕ್ ಭಟ್ಟಾಚಾರ್ಯ(25)ನನ್ನು ತಡೆದು ನಿಲ್ಲಿಸಿದ್ದ ಸದಾಶಿವ ಕಾಂಚನ್ ಆತ ತನ್ನ ಪುತ್ರಿಗೆ ಕಿರುಕುಳ ನೀಡುತ್ತಿದ್ದುದನ್ನು ಪ್ರಶ್ನಿಸಿದ್ದರು.ಇದರಿಂದ ಕುಪಿತಗೊಂಡಿದ್ದ ಆತ ಅವರ ತಲೆಗೆ ಮುಷ್ಟಿಯಿಂದ ಒಂದೇಸಮನೆ ಬಲವಾಗಿ ಗುದ್ದಿದ್ದು, ಕುಸಿದು ಬಿದ್ದು ಪ್ರಜ್ಞೆಯನ್ನು ಕಳೆದುಕೊಂಡಿದ್ದರು. ನವಿ ಮುಂಬೈನ ನೆರುಲ್‌ನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಕಾಂಚನ್ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಅಸುನೀಗಿದ್ದಾರೆ.

 ಎರಡು ತಿಂಗಳ ಹಿಂದಿನವರೆಗೂ ಲಿಬ್ಯಾದಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಭಟ್ಟಾಚಾರ್ಯ ಅಲ್ಲಿದ್ದುಕೊಂಡೇ ಕಳೆದ ಒಂದೂವರೆ ವರ್ಷದಿಂದಲೂ ಅವರ ಪುತ್ರಿಯನ್ನು ಆನ್‌ಲೈನ್‌ನಲ್ಲಿ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ. ಯುವತಿ ತನ್ನ ಫೋನ್ ನಂಬರ್ ಬದಲಿಸಿದ್ದರೂ ಆತನ ಕಾಟ ತಪ್ಪಿರಲಿಲ್ಲ.

ಲಿಬ್ಯಾದಿಂದ ಮರಳಿದ ಬಳಿಕ ಭಟ್ಟಾಚಾರ್ಯ ಯವತಿಯನ್ನು ಪ್ರತಿದಿನ ಕಾಲೇಜಿನವರೆಗೆ ಮತ್ತು ವಾಪಸ್ ಮನೆಯವರೆಗೆ ಹಿಂಬಾಲಿಸುತ್ತಿದ್ದ. ಕಾಂಚನ್ ಈ ಬಗ್ಗೆ ಆತನ ಹೆತ್ತವರಲ್ಲಿ ದೂರಿಕೊಂಡಿದ್ದರೂ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ.

 ನ.14ರಂದು ಸಂಜೆ ಭಟ್ಟಾಚಾರ್ಯನನ್ನು ರಸ್ತೆಯಲ್ಲಿ ತಡೆದಾಗ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದ ಕಾಂಚನ್ ಆತನಿಗೆ ಕೊನೆಯ ಎಚ್ಚರಿಕೆಯನ್ನು ನೀಡಲು ಬಯಸಿದ್ದರು. ಆದರೆ ಆತ ಅವರನ್ನೇ ಬಲಿ ತೆಗೆದುಕೊಂಡಿದ್ದಾನೆ.

ಹೆತ್ತವರ ಏಕೈಕ ಪುತ್ರಿಯಾಗಿರುವ ಯುವತಿ ತಂದೆಯ ಸಾವಿನ ಮುನ್ನಾದಿನ ತನ್ನ 18ನೇ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಳು. ಭಟ್ಟಾಚಾರ್ಯಗೆ ಶಿಕ್ಷೆ ಕೊಡಿಸದ ಹೊರತು ವಿರಮಿಸದಿರಲು ಆಕೆ ಪಣ ತೊಟ್ಟಿದ್ದಾಳೆ.

ಭಟ್ಟಾಚಾರ್ಯನನ್ನು ಶನಿವಾರ ಬಂಧಿಸಿರುವ ಪೊಲೀಸರು ಆತನ ವಿರುದ್ಧ ಕೊಲೆ ಆರೋಪವನ್ನು ಹೊರಿಸಿದ್ದು,ಸೋಮವಾರ ನ್ಯಾಯಾಲಯದಲ್ಲಿ ಹಾಜರು ಪಡಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X