ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಉದ್ಘಾಟನೆ

ಉಡುಪಿ, ನ.20: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರವಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿ ಕೊಳ್ಳಲಾದ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು.
ಯುವ ಸಮುದಾಯಕ್ಕೆ ಸರಕಾರ ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಪ್ರೋತ್ಯಾಹ ನೀಡುತ್ತಿದ್ದರೂ ಯುವ ಜನತೆ ಇದಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇಂತಹ ಸ್ಪರ್ಧೆಗಳಲ್ಲಿ ಯುವ ಸಮುದಾಯ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ದಿನಕರ ಬಾಬು ಹೇಳಿದರು.
ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ಕೇವಲ ಪಠ್ಯದಿಂದ ಬದುಕಿನಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ಇದರ ಜೊತೆ ನಮ್ಮಲ್ಲಿರುವ ಪ್ರತಿಭೆಗಳು ಕೂಡ ಮುಖ್ಯವಾಗು ತ್ತದೆ. ಹಾಗಾಗಿ ಇಂತಹ ವೇದಿಕೆಗಳಲ್ಲಿ ನಮ್ಮ ಕೌಶಲ್ಯ, ಪ್ರತಿಭೆಗಳನ್ನು ಪ್ರದರ್ಶಿ ಸುವ ಮೂಲಕ ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಈ ಬಾರಿಯ ಯುವಜನೋತ್ಸವಕ್ಕೆ ಜಿಪಂ ವತಿಯಿಂದ 50ಸಾವಿರ ರೂ. ಅನುದಾನ ಒದಗಿಸಲಾಗಿದೆ. ಹಾಗಾಗಿ ಸ್ಪರ್ಧೆಯ ವಿಜೇತರಿಗೆ ನಗದು ಬಹು ಮಾನ ನೀಡಲಾಗುವುದು. ಜಿಲ್ಲಾ ಮಟ್ಟದ ವಿಜೇತರು ಡಿಸೆಂಬರ್ ಮೊದಲ ವಾರದಲ್ಲಿ ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿ ಸಲು ಅರ್ಹತೆ ಪಡೆಯಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ತಿಳಿಸಿದರು.
ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಮಾತನಾಡಿ ದರು. ಅಜ್ಜರಕಾಡು ಸರಕಾರಿ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್ ಯೋಜ ನಾಧಿಕಾರಿ ಪ್ರಕಾಶ್ ಕ್ರಮಧಾರಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಜಾನಪದ ನೃತ್ಯ, ಹಾಡು, ನಾಟಕ, ಶಾಸ್ತ್ರೀಯ ಗಾಯನ, ವಾದ್ಯ, ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯ, ಅಶು ಭಾಷಣ ಸ್ಪರ್ಧೆಗಳು ನಡೆದವು. ಇದರಲ್ಲಿ ಜಿಲ್ಲೆಯಲ್ಲಿ ನೂರಾರು ಯುವಕ ಯುವತಿಯರು ಪಾಲ್ಗೊಂಡರು.







