ಬಂಧಿಸಿದ ರೈತರ ಬಿಡುಗಡೆ: ಸಿಎಂ ಸ್ಪಷ್ಟನೆ

ಬೆಳಗಾವಿ, ನ.21: ಹೆದ್ದಾರಿಗಳಲ್ಲಿ ಜಮಾಯಿಸಿದ್ದ ರೈತರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಲಾಗಿತ್ತು. ಸಾರ್ವಜನಿಕರಿಗೆ ತೊಂದರೆಯಾಗದಿರಲೆಂದು ಈ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಬಂಧಿತ ರೈತರನ್ನು ಬಿಡುಗಡೆ ಮಾಡಲು ಸೂಚಿಸಿದ್ದು ಎಲ್ಲರೂ ಬಿಡುಗಡೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸದನದಲ್ಲಿ ಸ್ಪಷ್ಟಪಡಿಸಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರದಿಂದ 10 ದಿನಗಳ ಕಾಲ ನಡೆಯಲಿರುವ ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಿದೆ. ರೈತರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ಬಿಜೆಪಿ ಸದಸ್ಯರು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸದನದಲ್ಲಿ ಪ್ರತಿಭಟನೆ ನಡೆಸಿದರು.
ವಿಪಕ್ಷಗಳ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಸಿಎಂ ಬಂಧಿಸಲಾಗಿದ್ದ ಎಲ್ಲ ರೈತರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
Next Story





