ಗ್ರಾಮೀಣ ಐಟಿ ಕ್ವಿಝ್: ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಡುಪಿ, ನ.22: ಎಂಜಿಎಂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆದಿತ್ಯ ಬಿ.ನಾಯಕ್ ಹಾಗೂ ಪ್ರಣೋಯ್ ಡಿಸೋಜ ಅವರು ರಾಜ್ಯಮಟ್ಟದ ಐಟಿ ಕ್ವಿಝ್ ಚಾಂಪಿಯನ್‌ಷಿಪ್‌ನಲ್ಲಿ ಅಗ್ರಪ್ರಶಸ್ತಿಯನ್ನು ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ.
ಟಿಸಿಎನ್‌ನ ಆಶ್ರಯದಲ್ಲಿ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಗ್ರಾಮೀಣ ಐಟಿ ಕ್ವಿಜ್‌ನ ಫೈನಲ್ಸ್‌ನಲ್ಲಿ ಆದಿತ್ಯ ಮತ್ತು ಪ್ರಣೋಯ್ ತಂಡ ಪ್ರಥಮ ಸ್ಥಾನವನ್ನು ಪಡೆದು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ ಎಂದು ಎಂಜಿಎಂ ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
Next Story





