Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನಮೋಹನ್‌ಗೆ ತಿರುಗೇಟು ನೀಡಿದ ಅರುಣ್...

ಮನಮೋಹನ್‌ಗೆ ತಿರುಗೇಟು ನೀಡಿದ ಅರುಣ್ ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ24 Nov 2016 10:32 PM IST
share
ಮನಮೋಹನ್‌ಗೆ ತಿರುಗೇಟು ನೀಡಿದ ಅರುಣ್ ಜೇಟ್ಲಿ

ಹೊಸದಿಲ್ಲಿ, ನ.24: ನೋಟು ರದ್ದತಿಯ ಬಗ್ಗೆ ಚರ್ಚೆಯಿಂದ ಪಲಾಯನ ಮಾಡುವುದಕ್ಕಾಗಿ ವಿರೋಧ ಪಕ್ಷವು ಕಾರಣಗಳನ್ನು ಸಂಶೋಧಿಸುತ್ತಿದೆಯೆಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇಮದು ಆರೋಪಿಸಿದ್ದಾರೆ.

ಈ ಬಗ್ಗೆ ಟೀಕೆಯನ್ನು ಮಾಡಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರಿಗೆ ತಿರುಗೇಟು ನೀಡಿದ ಅವರು, ಸಿಂಗ್‌ರ ಆಡಳಿತದಲ್ಲಿ ಗರಿಷ್ಠ ಕಪ್ಪು ಹಣ ಸೃಷ್ಟಿಯಾಗಿರುವುದರಿಂದ ಅವರು ಅಸಂತುಷ್ಟರಾದುದರಲ್ಲಿ ಆಶ್ಚರ್ಯವಿಲ್ಲ ಎಂದಿದ್ದಾರೆ.

ಜಿಡಿಪಿ ಬೆಳವಣಿಗೆ ಶೇ.2ರಷ್ಟು ಕುಸಿಯಲಿದೆಯೆಂಬ ಸಿಂಗ್‌ರ ಪ್ರತಿಪಾದಬೆಯನ್ನು ತಳ್ಳಿ ಹಾಕಿದ ಜೇಟ್ಲಿ, ಛಾಯಾ ಆರ್ಥಿಕತೆಯು ಪ್ರಧಾನ ವಾಹಿನಿಗೆ ಬರುವುದರಿಂದ ನೋಟು ರದ್ದತಿಯ ಧನಾತ್ಮಕ ಪರಿಣಾಮವು ಮಧ್ಯದಿಂದ ದೀರ್ಘಾವಧಿಯ ತನಕ ಬೀಳಲಿದೆ ಎಂದವರು ಹೇಳಿದರು.

ಇಷ್ಟೊಂದು ಕಾಳ ಧನದ ಉತ್ಪಾದನೆಯನ್ನು ಹಾಗೂ ಭ್ರಷ್ಟಾಚಾರವನ್ನು ಯಾರೂ ಪರಿಗಣಿಸಿರಲಿಲ್ಲವೋ ಅವರು ಆಡಳಿತದಲ್ಲಿ ಪ್ರಮಾದ ಎಸಗಿದ್ದರು. ಅಂತಹವರೀಗ ಕಪ್ಪು ಹಣದ ವಿರುದ್ಧ ಧರ್ಮ ಯುದ್ಧವನ್ನು ಪ್ರಮಾದವೆನ್ನುತ್ತಿದ್ದಾರೆಂದು ಜೇಟ್ಲಿ ವಾಗ್ದಾಳಿ ನಡೆಸಿದರು.

ನೋಟು ರದ್ದತಿಯ ಅನುಷ್ಠಾನವು ಒಂದು ‘ಭವ್ಯ ಆಡಳಿತ ವೈಫಲ್ಯ’ ಹಾಗೂ ‘ಸಂಘಟಿತ ಲೂಟಿ ಮತ್ತು ಕಾನೂನುಬದ್ಧಗೊಳಿಸಿದ ಸುಲಿಗೆಯಾಗಿದೆ’ ಎಂದು ರಾಜ್ಯಸಭೆಯಲ್ಲಿ ಚರ್ಚೆಯ ವೇಳೆ ಮನಮೋಹನ್ ಸರಕಾರ ಹಾಗೂ ಪ್ರಧಾನಿಯ ವಿರುದ್ಧ ಮಾಡಿದ ಆರೋಪಕ್ಕೆ ಜೇಟ್ಲಿ ಪ್ರತಿಕ್ರಿಯಿಸುತ್ತಿದ್ದರು.

ಸಂಪೂರ್ಣ ಚರ್ಚೆಯ ವೇಳೆ ಪ್ರಧಾನಿ ಸದನದಲ್ಲಿ ಹಾಜರಿರಬೇಕೆಂದು ಆಗ್ರಹಿಸಿ ವಿಪಕ್ಷ ಕೋಲಾಹಲ ಎಬ್ಬಿಸಿದುದರಿಂದ ರಾಜ್ಯಸಭೆ ಮತ್ತೆ ಮತ್ತೆ ಮುಂದೂಡಲ್ಪಟ್ಟಾಗ ಜೇಟ್ಲಿ, ವಿಪಕ್ಷವು ಚರ್ಚೆಯಲ್ಲಿ ಆಸಕ್ತವಾಗಿರದೆ, ಕಲಾಪ ಭಂಗದಲ್ಲೇ ಆಸಕ್ತವಾಗಿದೆಯೆಂದು ಹರಿಹಾಯ್ದರು.

ಸರಕಾರವು ಚರ್ಚೆಗೆ ಸಿದ್ಧವಿದೆಯೆಂದು ಮೊದಲ ದಿನದಿಂದಲೇ ಸ್ಪಷ್ಟಪಡಿಸುತ್ತ ಬಂದಿದ್ದೇವೆ. ವಿಪಕ್ಷವು ಚರ್ಚೆಯಿಂದ ಪಾರಾಗಲು ನೆಪಗಳನ್ನು ಹುಡುಕುತ್ತಿದೆ. ಪ್ರಧಾನಿ ಚರ್ಚೆಯಲ್ಲಿ ಪಾಲ್ಗೊಳ್ಳುವರೆಂದು ತಾವು ಇಂದು ಮುಂಜಾನೆ ತಿಳಿಸಿದಾಗ ಅವರಿಗೆ ಅಚ್ಚರಿಯಾಯಿತು. ಈಗ ವಿಪಕ್ಷದವರು ಚರ್ಚೆಯಿಂದ ಪಲಾಯನ ಮಾಡಲು ಕಾರಣಗಳನ್ನು ಹುಡುಕುತ್ತಿದ್ದಾರೆ ಹಾಗೂ ತಯಾರಿಸುತ್ತಿದ್ದಾರೆಂದು ಅವರು ಕಿಡಿಗಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X