ಮಾಣಿ ಬಾಲವಿಕಾಸ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ, ನ. 24: ಕ್ರೀಡೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ಆರೋಗ್ಯವಂತ ಸವಾಜದ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ವೆಯ್ಟಾ ಲಿಪ್ಟಿಂಗ್ ತರಬೇತುದಾರ ಪ್ರಮೋದ್ ಶೆಟ್ಟಿ ಹೇಳಿದರು.
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಿಂದ ಆರೋಗ್ಯ ವರ್ಧಿಸಲು ಸಾಧ್ಯ. ಎಲ್ಲದಕ್ಕೂ ಔಷಧಿಯೇ ಮೂಲವಲ್ಲ. ಸ್ಪರ್ಧಾಳುಗಳಿಗೆ ಕ್ರೀಡಾ ಸ್ಪೂರ್ತಿ ಅಗತ್ಯ ಎಂದರು.
ಶಾಲಾ ಸಂಚಾಲಕ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಪ್ರಹ್ಲಾದ ಜೆ. ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಕೆ. ಬಾಲಕೃಷ್ಣ ಆಳ್ವ ಮಾತನಾಡಿದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ನಿವೃತ್ತ ಶಿಕ್ಷಕಿ ಲಕ್ಷ್ಮಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರ್ ವಿ., ಶಾಲಾ ಆಡಳಿತಾಧಿಕಾರಿ ಸಿ. ಶ್ರೀಧರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ. ಸಲ್ಡಾನಾ ಉಪಸ್ಥಿತರಿದ್ದರು.
ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ .ವಿ. ಶೆಟ್ಟಿ ಸ್ವಾಗತಿಸಿ , ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದಿನಕರ್ ಪೂಜಾರಿ ವಂದಿಸಿದರು. ಶಿಕ್ಷಕಿಯರಾದ ಸುಧಾ ಎನ್.ರಾವ್ ಮತ್ತು ಜಯಶ್ರೀ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.







