ಬಾಲಕಿಯ ಅತ್ಯಾಚಾರ ಆರೋಪಿಗೆ ಜೆಲು ಶಿಕೆ್ಷ
ಚಿಕ್ಕಮಗಳೂರು, ನ.24: ಒಂಬತ್ತರ ಹರೆಯದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ 1ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.
ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬಳೆ ಗ್ರಾಮದ ವಾಸಿ ಸತೀಶ್ ಎಂಬಾತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಹಿನ್ನೆಲೆ ಗ್ರಾಮಾಂತರ ಪೋಲಿಸ್ ಠಾಣೆಯವರು ಪ್ರಕರಣವನ್ನು ದಾಖಲಿಸಿಕೊಂಡು ಕಲಂ 376(2)(ಐ) ಮತ್ತು ಪೊಕ್ಸೋ ಕಾಯ್ದೆ ಕಲಂ 4ರ ಅನ್ವಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೆ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ನಂದಕುಮಾರ್ ಅವರು ಆರೋಪಿ ಸತೀಶನಿಗೆ ಕಲಂ 376(2)(ಐ) ಮತ್ತು ಪೊಕ್ಸೋ ಕಾಯ್ದೆ ಕಲಂ4ರ ಅಪರಾಧಕ್ಕೆ 7ವರ್ಷ ಜೈಲು ಶಿಕ್ಷೆ ಹಾಗೂ ರೂ. 2,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರ ಪರವಾಗಿ ಸರಕಾರಿ ಅಭಿಯೋಜಕ ಆರ್.ನಾಗರಾಜ್ ಮೊಕದ್ದಮೆಯನ್ನು ನಡೆಸಿದರು.
Next Story





