ಅಕ್ರಮ ಮದ್ಯ ಮಾರಾಟ: ಓರ್ವನ ಬಂಧನ
ಶಿವಮೊಗ್ಗ, ನ.25: ಯಾವುದೇ ಪರವಾನಿಗೆಯಿಲ್ಲದೆ ಕಾನೂನು ಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವ ಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದ ಎ.ಕೆ. ಕಾಲನಿಯಲ್ಲಿ ವರದಿಯಾಗಿದೆ. ಮಹೇಶ್ವರಪ್ಪ (28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಆರೋಪಿಯಿಂದ ವಿವಿಧ ಕಂಪೆನಿಯ ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





