ಕುಕ್ಕೆ: ಷಷ್ಠಿ ಜಾತ್ರೋತ್ಸವ ಆರಂಭ
ಸುಬ್ರಹ್ಮಣ್ಯ, ನ.26: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ಜಾತ್ರೋತ್ಸವಕ್ಕೆ ಶನಿವಾರ ಚಾಲನೆ ದೊರೆತಿದೆ.
ಬೆಳಗ್ಗೆ ದೇವಳದ ಒಳಾಂಗಣದಲ್ಲಿ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ವಿವಿಧ ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿದರು. ಬಳಿಕ ರಾಮ-ಲಕ್ಷ್ಮಣ ಎಂಬ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಳದ ಒಳಾಂಗಣದಲ್ಲಿರುವ ದೊಡ್ಡದಾದ ಎರಡು ಒಲೆಗಳ ಮೇಲೆ ಏರಿಸಲಾಯಿತು. ಕೊಪ್ಪರಿಗೆಗಳಲ್ಲಿ ಅನ್ನ ಬೆಂದ ಬಳಿಕ ಅದಕ್ಕೆ ಪೂಜೆ ಸಲ್ಲಿಸಲಾಯಿತು. ಡಿ.11ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.
Next Story





