ಹಲ್ಲೆಗೆ ಯತ್ನ: ಅಪಾಯದಿಂದ ಪಾರು
ಕಾರ್ಕಳ, ನ.26: ಹಿರಿಯಂಗಡಿ ಸಮೀಪ ಶ್ರೀನಿವಾಸ ಗ್ಲಾಸ್ ಅಂಗಡಿ ಬಳಿ ನ.26ರಂದು ಬೆಳಗಿನ ಜಾವ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳು ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಲು ಯತ್ನಿಸಿ ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.
ಕೆಲವು ಮಂದಿ ಕಾರಿನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ನೋಡಿ ಕಾರ್ಕಳ ನಗರ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರಕಾಂತ ಹೋಮ್‌ಗಾರ್ಡ್‌ರೊಂದಿಗೆ ಸ್ಥಳಕ್ಕೆ ತೆರಳಿದಾಗ ದುಷ್ಕರ್ಮಿಗಳು ಹಲ್ಲೆ ನಡೆಸಲು ಯತ್ನಿಸಿ ದೂಡಿ ಹಾಕಿ ಅವರ ಕರ್ತವ್ಯಕ್ಕೆ ಅಡ್ಡಿಯನ್ನುಂಟು ಮಾಡಿ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





