Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲೆಯಲ್ಲಿ ಹೇಗಿರಲಿದೆ ‘ಆಕ್ರೋಶ ದಿನ’...

ಜಿಲ್ಲೆಯಲ್ಲಿ ಹೇಗಿರಲಿದೆ ‘ಆಕ್ರೋಶ ದಿನ’ ಆಚರಣೆ?

ವಾರ್ತಾಭಾರತಿವಾರ್ತಾಭಾರತಿ27 Nov 2016 8:03 PM IST
share
ಜಿಲ್ಲೆಯಲ್ಲಿ ಹೇಗಿರಲಿದೆ ‘ಆಕ್ರೋಶ ದಿನ’ ಆಚರಣೆ?

ಮಂಗಳೂರು, ನ. 27: ನೋಟು ಅಮಾನ್ಯಗೊಳಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ಹಾಗೂ ನೋಟುಗಳಮೇಲಿನ ನಿಷೇಧವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ವಿಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳು ನ.28ರಂದು ಕರೆ ಕೊಟ್ಟಿರುವ ‘ಆಕ್ರೋಶ ದಿನ’ ಆಚರಣೆಯ ಸಂದರ್ಭದಲ್ಲಿ ದ.ಕ. ಜಿಲ್ಲೆಯ ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ಸುಗಳು ಹಾಗೂ ಆಟೋ ರಿಕ್ಷಾಗಳು ಎಂದಿನಂತೆ ಸಂಚಾರ ನಡೆಸಲಿದೆ ಎಂದು ಆಯಾ ಸಂಘಟನೆಗಳು ಸ್ಪಷ್ಟಪಡಿಸಿವೆ.

ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ

ಆಕ್ರೋಶ ದಿನ ಆಚರಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ದ.ಕ. ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಕೆಎಸ್ಸಾರ್ಟಿಸಿ ಬಸ್ ಬಂದ್ ಇಲ್ಲ

ಕೆಎಸ್ಸಾರ್ಟಿಸಿ ಬಸ್‌ಗಳು ಎಂದಿನಂತೆ ಬೆಳಗ್ಗೆಯಿಂದ ಓಡಾಟ ಪ್ರಾರಂಭಿಸಲಿದೆ. ಕೆಎಸ್ಸಾರ್ಟಿಸಿ ಬಸ್‌ಗಳ ಎಲ್ಲಾ ಚಾಲಕರು, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಲಿದ್ದು, ಮಂಗಳೂರು ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಎಲ್ಲಾ ಬಸ್ಸುಗಳು ಸಂಚರಿಸಲಿದೆ ಎಂದು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ಹೆಗ್ಡೆ ತಿಳಿಸಿದ್ದಾರೆ.

ಸಿಟಿ ಬಸ್ ಬಂದ್ ಇಲ್ಲ

ದ.ಕ. ಜಿಲ್ಲೆಯ ಸಿಟಿ ಬಸ್‌ಗಳ ಸಂಚಾರ ನಿಲ್ಲಿಸುವುದಿಲ್ಲ. ವಿದ್ಯಾರ್ಥಿಗಳು, ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಎಂದಿನಂತೆ ಸಿಟಿ ಬಸ್‌ಗಳು ಓಡಾಟ ನಡೆಸಲಿದೆ. ಒಂದು ವೇಳೆ ಸಂಚಾರಕ್ಕೆ ಅಡಚರಣೆ ಉಂಟಾದರೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಂಚಾರವನ್ನು ಸ್ಥಗಿತಗೊಳಿಸುವುದಾಗಿಯೂ ಎಂದು ದ.ಕ. ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಜೀಝ್ ಪರ್ತಿಪಾಡಿ ತಿಳಿಸಿದ್ದಾರೆ.

ಅಟೋ ರಿಕ್ಷಾಗಳು ಬಂದ್ ಇಲ್ಲ

ನ.28ರ ಆಕ್ರೋಶ ದಿನಾಚರಣೆಗೆ ಆಟೋ ರಿಕ್ಷಾ ಚಾಲಕರ ಬೆಂಬಲ ಇದ್ದು, ಆದರೆ, ನಗರದ ಆಟೊ ರಿಕ್ಷಾಗಳು ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಫೆಡರೇಶನ್ ಕರ್ನಾಟಕ ಆಟೋ ರಿಕ್ಷಾ ಚಾಲಕರ ಯೂನಿಯನ್‌ನ ನಗರಾಧ್ಯಕ್ಷ ಲಿಂಗಪ್ಪ ನಂತೂರು ತಿಳಿಸಿದ್ದಾರೆ.

ಪ್ರತಿಭಟಿಸಿ ಡಿಸಿಗೆ ಮನವಿ: ಕೋಡಿಜಾಲ್

ಕೇಂದ್ರದ ನೋಟು ರದ್ದತಿಯ ವಿರುದ್ಧ ಸೆ.28ರಂದು ಆಕ್ರೋಶ ದಿನಾಚರಣೆಯನ್ನು ಆಚರಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 10:30ಕ್ಕೆ ಕಾಂಗ್ರೆಸ್ ವತಿಯಿಂದ ನಗರದ ಪುರಭವನ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

‘ಆಕ್ರೋಶ ದಿನ’ವಲ್ಲ; ಸಂತಸದ ದಿನ: ಮಟ್ಟಾರು

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದಲ್ಲಿ ಶೇ. 40ರಷ್ಟು ಕೂಡಿಟ್ಟಿದ್ದ ಕಪ್ಪು ಹಣವನ್ನು ಹೊರಬರಲು ಪ್ರಯತ್ನ ಮಾಡಿದ್ದಾರೆ. ಮೋದಿಯವರ ಈ ಕ್ರಮವನ್ನು ದೇಶದ ಜನತೆ ಶ್ಲಾಘಿಸಿದೆ. ಕೇಂದ್ರದ ಈ ಕ್ರಮದಿಂದ ಬಡವರು, ಮಧ್ಯಮ ವರ್ಗದವರು ಅಥವಾ ಶ್ರೀಮಂತರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗಿಲ್ಲ. ಕಪ್ಪು ಹಣ ಇಟ್ಟುಕೊಂಡವರಿಗೆ, ತೆರಿಗೆ ವಂಚಕರಿಗೆ ತೊಂದರೆಯಾಗಿರಬಹುದು. ಕೇಂದ್ರದ ಈ ಕ್ರಮವನ್ನು ‘ಆಕ್ರೋಶ ದಿನ’ದ ಬದಲು ಸಂತಸದ ದಿನವನ್ನಾಗಿ ಆಚರಿಸಬೇಕು. ಆದ್ದರಿಂದ ಯಾರೂ ಕೂಡ ಈ ಆಕ್ರೋಶದ ದಿನದಲ್ಲಿ ಪಾಲ್ಗೊಳ್ಳಬಾರದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X