ರೈತರ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಆದೇಶ ನೀಡಿಲ್ಲ: ಡಿಸಿ

ಮಂಗಳೂರು, ನ.27: ಜನವರಿಯಿಂದ ಜಿಲ್ಲೆಯ ನದಿ ತಟದಿಂದ ನೀರು ಬಳಸಿದರೆ ರೈತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವವುದಾಗಿ ಯಾವುದೇ ಆದೇಶ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಯ ಹಿನ್ನೆಲೆಯಲ್ಲಿ ಪ್ರಕಟನೆ ನೀಡಿರುವ ಅವರು, ನ.5ರಂದು ನಡೆದ ಸಭೆಯಲ್ಲಿ ನೀರಿನ ಸಮಸ್ಯೆಯನ್ನು ನೀಗಿಸುವ ಸಲುವಾಗಿ ಮುಂಜಾಗರೂಕತಾ ಕ್ರಮವಾಗಿ ಜನವರಿ, ಫೆಬ್ರವರಿ, ಮಾರ್ಚ್, ಎಪ್ರಿಲ್ ತಿಂಗಳಲ್ಲಿ ತೋಟಗಾರಿಕಾ ಬೆಳೆಗಳನ್ನು ಹೊರತುಪಡಿಸಿ ಕೃಷಿ ಬೆಳೆಗಳಿಗೆ ನದಿ ತಟ, ಕಿಂಡಿ ಅಣೆಕಟ್ಟುಗಳಿಂದ ನೀರು ಬಳಸುವಂತಿಲ್ಲ. ಈ ಬಗ್ಗೆ ರೈತರಿಗೆ ತಿಳುವಳಿಕೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಮತ್ತು ನೀರು ಬಳಸಿದರೆ ವಿದ್ಯುತ್ ಸಂಪರ್ಕ ಕಡಿದು ಹಾಕಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದು ಬಿಟ್ಟು ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿಲ್ಲ’ ಎಂದು ತಿಳಿಸಿದ್ದಾರೆ.
Next Story





