ಕಾಸರಗೋಡಿನಲ್ಲಿ 'ಕೇರಳ ಬಂದ್' ಯಶಸ್ವಿ

ಕಾಸರಗೋಡು, ನ.28 : ಕೇಂದ್ರ ಸರಕಾರ 500 ಹಾಗೂ 1000ರೂ. ಅಮಾನ್ಯಗೊಳಿಸಿದ ಹಿನ್ನೆಲೆ ಜನಸಾಮಾನ್ಯರಿಗೆ ಉಂಟಾದ ಸಮಸ್ಯೆ ಪರಿಹರಿಸಲು ಕೇಂದ್ರ ಸರಕಾರದ ವೈಫಲ್ಯ ಹಾಗೂ ಸಹಕಾರಿ ಬ್ಯಾ೦ಕ್ ಗಳಲ್ಲಿ ವಹಿವಾಟು ಸ್ಥಗಿತಗೊಂಡಿರುವುದನ್ನು ಪ್ರತಿಭಟಿಸಿ ಎಲ್ ಡಿಎಫ್ ಎಫ್ ಕರೆ ನೀಡಿರುವ ಕೇರಳ ಬಂದ್ ಗೆ ಕಾಸರಗೋಡು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಖಾಸಗಿ ಹಾಗೂ ಕೆಎಸ್ಸಾರ್ಟಿಸಿ ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ಕೆಲವೇ ಕೆಲ ಖಾಸಗಿ ವಾಹನಗಳು ರಸ್ತೆಗೆ ಇಳಿದಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬಸ್ಸು ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಬ್ಯಾ೦ಕ್ ಗಳು ಎಂದಿನಂತೆ ಕಾರ್ಯಾಚರಿಸುತ್ತಿದ್ದು, ಗ್ರಾಹಕರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.
ಜಿಲ್ಲೆಯ ಎಲ್ಲಾ ಕಡೆ ಬಂದ್ ಬಿಸಿ ತಟ್ಟಿದ್ದು, ಬೆಳಗ್ಗೆ ಕಾಸರಗೋಡು ರೈಲು ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರು ಬಸ್ಸು ಹಾಗೂ ಇತರ ವಾಹನ ಸೌಲಭ್ಯ ಇಲ್ಲದೆ ಪರದಾಡುವಂತಾಯಿತು.
ಎಲ್ ಡಿ ಎಫ್ ಕಾರ್ಯಕರತರು ಬೆಳಗ್ಗೆ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿತು.







