Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮರ್ಪಕ ಮರಳು ವಿತರಣೆಗೆ ಕ್ರಮ ಕೈಗೊಳ್ಳಿ:...

ಸಮರ್ಪಕ ಮರಳು ವಿತರಣೆಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ28 Nov 2016 10:49 PM IST
share
ಸಮರ್ಪಕ ಮರಳು ವಿತರಣೆಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ, ನ.28: ಜಿಲ್ಲೆಯಲ್ಲಿ ನಡೆಯುತ್ತಿರುವ ಸರಕಾರಿ ಮತ್ತು ಖಾಸಗಿ ಕಟ್ಟಡಗಳ ನಿರ್ಮಾಣ ಕಾಮಗಾರಿಗಳಿಗೆ ಮರಳಿನ ಅಗತ್ಯವಿದ್ದು, ಯಾವುದೇ ಅಡಚಣೆಯಾಗದಂತೆ ಮರಳನ್ನು ಸಮರ್ಪಕವಾಗಿ ವಿತರಿಸಲು ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ಸೂಚಿಸಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಮರಳು ಸಮರ್ಪಕ ಸರಬರಾಜು ಮಾಡುವ ಸಂಬಂಧ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಗಣಿಗಾರಿಕೆ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ನೂತನ ಮರಳು ನೀತಿ ಅನುಷ್ಠಾನಕ್ಕೆ ಬರುವವರೆಗೆ ಲೋಕೋಪಯೋಗಿ ಇಲಾಖಾಧಿಕಾರಿಗಳು ವ್ಯವಸ್ಥಿತ ಮರಳು ವಿತರಣೆಗೆ ಮುಂದಾಗಬೇಕು ಈಗಾಗಲೇ ಟೆಂಡರ್ ಪಡೆದು ಅವಧಿ ಪೂರ್ಣಗೊಳ್ಳದ ಮರಳು ಕ್ವಾರಿಗಳನ್ನು ಅವಧಿ ಪೂರ್ಣಗೊಳ್ಳುವವರೆಗೆ ಮುಂದುವರಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.


ಹೊಸ ಮರಳು ನೀತಿ ಜಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಬ್ಲಾಕ್‌ಗಳಲ್ಲಿ ಮರಳು ಸರಬರಾಜಿಗೆ ಇನ್ನೊಂದು ವಾರದಲ್ಲಿ ಟೆ ಂಡರ್ ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡು ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಟೆಂಡರ್ ಕರೆದು ತ್ವರಿತವಾಗಿ ಮರಳು ವಿತರಣೆಗೆ ಮುಂದಾಗುವಂತೆ ಪ್ರಭಾರ ಭೂವಿಜ್ಞಾನಿ ವಿಂದ್ಯಾ ಅವರಿಗೆ ಸೂಚಿಸಿದರು.


ಜಿಲ್ಲೆಯಲ್ಲಿನ ಒಟ್ಟು 45ಮರಳು ಬ್ಲಾಕ್‌ಗಳಲ್ಲಿ 10ಬ್ಲಾಕ್‌ಗಳನ್ನು ಹೊರತುಪಡಿಸಿ ಉಳಿದ ಬ್ಲಾಕ್‌ಗಳಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದ ನೀರು ನಿಂತಿದೆ. ಇದರಿಂದಾಗಿ ಮರಳು ಸರಬರಾಜು ಮಾಡಲು ಇನ್ನೂ ಕೆಲವು ತಿಂಗಳುಗಳ ಕಾಲಾವಕಾಶ ಬೇಕಾಗಬಹುದು. ಪ್ರಸ್ತುತ ಲಭ್ಯವಾಗುವ 10ಬ್ಲಾಕ್‌ಗಳಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 2ಬ್ಲಾಕ್‌ಗಳಿದ್ದು, ಅವುಗಳಲ್ಲಿ ಹಾಡೋನಹಳ್ಳಿಯ ಬ್ಲಾಕ್‌ನಲ್ಲಿ ದೊರೆಯುವ ಮರಳನ್ನು ಸರಕಾರದ ವಿವಿಧ ಕಾಮಗಾರಿಗಳಿಗೆ ಕಾಯ್ದಿರಿಸಲಾಗಿದೆ. ಉಳಿದ ಒಂದನ್ನು ಸಾರ್ವಜನಿಕ ವಿತರಣೆಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಉಳಿದಂತೆ ತೀರ್ಥಹಳ್ಳಿ ತಾಲೂಕಿನ 4 ಬ್ಲಾಕ್‌ಗಳಲ್ಲಿ ಬಗ್ಗೋಡಿಗೆ(ಎಸ್.ಸಿ.,), ನಂಬಳ(ಎಸ್.ಟಿ.), ತೂದೂರು-3(ಅಂಗವಿಕಲ) ಹಾಗೂ ತೂದೂರು-1(ಇತರ) ವರ್ಗಗಳಿಗೆ ಕಾಯ್ದಿರಿಸಲಾಗಿದೆ. ಹೊಸನಗರ ತಾಲೂಕಿನ ನಂಜವಳ್ಳಿ-2(ಎಸ್.ಸಿ.,), ಸುತ್ತ-2(ಎಸ್.ಟಿ.), ನಂಜವಳ್ಳಿ-1(ಅಂಗವಿಕಲ) ಹಾಗೂ ಸೋನಲೆ ಬ್ಲಾಕ್‌ನ್ನು ಇತರ ವರ್ಗಕ್ಕೆ ನೀಡುವಂತೆ ಜಿಲ್ಲಾಧಿಕಾರಿಯವರ ಉಪಸ್ಥಿತಿಯಲ್ಲಿ ಲಾಟರಿ ಎತ್ತುವ ಮೂಲಕ ನಿಗದಿಪಡಿಸಲಾಯಿತು.
ಜಿಲ್ಲೆಯ ವಿವಿಧ ತಾಲೂಕಿನ ಮರಳು ಕ್ವಾರಿಗಳ ವಾಸ್ತವ ಸ್ಥಿತಿಯನ್ನು ಅರಿಯಲು ಉಪವಿಭಾಗಾಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಈಗಾಗಲೇ ವಿವಿಧ ಸ್ಥಳಗಳಲ್ಲಿ ಹಿಡಿದಿಡಲಾದ ಅಕ್ರಮ ಮರಳನ್ನು ಸರಕಾರದ ಕಾಮಗಾರಿಗಳಿಗೆ ಕಾರ್ಯಾದೇಶ ಪರಿಶೀಲಿಸಿ ನೀಡುವಂತೆ ಲೋಕೋಪಯೋಗಿ ಇಲಾಖೆ ಅಭಿಯಂತರರಿಗೆ ಸೂಚಿಸಿದರು.
ಹೊಸದಾಗಿ ಮರಳು ವಿತರಣೆಗೆ ಸಂಬಂಧಿಸಿ ದಂತೆ ನೂತನ ಮರಳು ನೀತಿಯನ್ವಯ ದರನಿಗದಿಪಡಿಸಬೇಕು. ಅದಕ್ಕಾಗಿ ನಿಗದಿಪಡಿಸಿದ ಸ್ಥಳ ಮತ್ತು ನಿಗದಿಪಡಿಸಬಹುದಾದ ದರಗಳ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ದರನಿಗದಿ ಮಾಡಲು ಮುಂದಿನ ಸಭೆಗೆ ಹಾಜರುಪಡಿಸುವಂತೆ ಹಿರಿಯ ಭೂ ವಿಜ್ಞ್ಞಾನಿಗಳಿಗೆ ಸೂಚಿಸಿದರು.


ಸಭೆಯಲ್ಲಿ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ರಾಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್‌ಖರೆ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿ ಕೃಷ್ಣಮೂರ್ತಿ ಹಾಗೂ ಸತೀಶ್‌ಕುಮಾರ್, ಹಿರಿಯ ಭೂ ವಿಜ್ಞಾನಿ ವಿಂದ್ಯಾ ಸೇರಿದಂತೆ ಅರಣ್ಯ, ಕಂದಾಯ, ಹಾಗೂ ಸಾರಿಗೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X