ಕರಾಟೆ: ಸಹನಾ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ, ನ. 28: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಜಿಲ್ಲಾ ವಳಕಾಡುನಲ್ಲಿ ಜರಗಿದ ರಾಜ್ಯ ಮಟ್ಟದ ಪ್ರೌಢ ಶಾಲಾ ಮಟ್ಟದ 36-40 ಕೆ.ಜಿ. ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸಹನಾ ಎಂ.ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕು ಕಲಾಬಾಗಿಲು ಬುರೂಜ್ ಆಂಗ್ಲ ಮಾಧ್ಯಮ ಶಾಲೆಯ 10ನೆ ತರಗತಿ ವಿದ್ಯಾರ್ಥಿನಿಯಾದ ಸಹನಾ ಎಂ.ಶೆಟ್ಟಿ ನರ್ವಲ್ದಡ್ಡ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಹಿಂದೆ ನಡೆಸಿರುವ ಕರಾಟೆ ಸ್ಪರ್ಧೆಯಲ್ಲಿ ಸತತ ಮೂರನೆ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರಾಟೆಯಲ್ಲಿ ವಿಶೇಷ ಸಾಧನೆಗೈದಿರುವ ಆಕೆ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಮೂಡಬಿದಿರೆಯ ನದೀಂ ಮತ್ತು ಸರ್ಫರಾಜ್ ಎಂಬವರು ಈಕೆಯ ತರಬೇತುದಾರರಾಗಿದ್ದಾರೆ.
Next Story





