ಮಂಗಳೂರು ವಿವಿ ಮಹಿಳಾ ಅಧ್ಯಯನ ಕೇಂದ್ರದಿಂದ ನ.30ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮ
ಕೊಣಾಜೆ, ನ.29: ಮಂಗಳೂರು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಡಿ.1ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವು ಮಂಗಳೂರು ವಿವಿಯ ಹಳೆಸೆನೆಟ್ ಸಭಾಂಗಣದಲ್ಲಿ ನಡೆಯಲಿದೆ.
‘ರೇಸಿಸಮ್ ಆಂಡ್ ಮಲ್ಟಿಕಲ್ಚರಲಿಸಮ್ ಇನ್ ಕೆನಡಾ: ದಿ ಕೇಸ್ ಆಫ್ ದಿ ಮಿಸ್ಸಿಂಗ್ ಅಬೋರಿಜಿನಲ್ ವುಮೆನ್’ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕೆನಡಾ ಟೊರಂಟೋ ಯೋರ್ಕ್ ವಿಶ್ವವಿದ್ಯಾಲಯದ ಪ್ರೊ.ಡೇನಿಯಲ್ ಡ್ರಾಕ್ ಅವರು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಸಚಿವ ಪ್ರೊ.ಕೆ.ಎಂ.ಲೋಕೇಶ್ ಅವರು ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಯೋಜಕಿ ಹಾಗೂ ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಅನಿತಾ ರವಿಶಂಕರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story