Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಪಂ ಎದುರು ಶಿರಿಯಾರ ಗ್ರಾಪಂ ಅಧ್ಯಕ್ಷೆ...

ಜಿಪಂ ಎದುರು ಶಿರಿಯಾರ ಗ್ರಾಪಂ ಅಧ್ಯಕ್ಷೆ ಜ್ಯೋತಿ ಧರಣಿ

ವಾರ್ತಾಭಾರತಿವಾರ್ತಾಭಾರತಿ29 Nov 2016 10:19 PM IST
share
ಜಿಪಂ ಎದುರು ಶಿರಿಯಾರ ಗ್ರಾಪಂ ಅಧ್ಯಕ್ಷೆ ಜ್ಯೋತಿ ಧರಣಿ

ಉಡುಪಿ, ನ.29: ಶಿರಿಯಾರ ಗ್ರಾಪಂನ ಅಧ್ಯಕ್ಷ ಸ್ಥಾನದಿಂದ ದಲಿತ ಮಹಿಳೆಯಾದ ತನ್ನನ್ನು ಕೆಳಗಿಸುವ ಹುನ್ನಾರದಿಂದಲೇ ಶಿರಿಯಾರ ಗ್ರಾಪಂನ್ನು ಬರ್ಖಾಸ್ತು ಮಾಡಲು ಜಿಪಂ ನಿರ್ಣಯಕೈಗೊಳ್ಳಲು ಮುಂದಾಗಿರುವುದನ್ನು ಖಂಡಿಸಿ, ಈ ನಿರ್ಣಯವನ್ನು ವಾಪಾಸು ಪಡೆಯಬೇಕೆಂದು ಒತ್ತಾಯಿಸಿ ಶಿರಿಯಾರ ಗ್ರಾಪಂನ ಅಧ್ಯಕ್ಷೆ ಜ್ಯೋತಿ ಇಂದು ಮಣಿಪಾಲದಲ್ಲಿರುವ ಉಡುಪಿ ಜಿಪಂ ಎದುರು ಏಕಾಂಗಿಯಾಗಿ ಧರಣಿ ನಡೆಸಿದರು.

ಜಿಪಂ ಸಭಾಂಗಣದಲ್ಲಿ ಜಿಪಂನ 4ನೇ ಸಾಮಾನ್ಯ ಸಭೆಯಲ್ಲಿ ಶಿರಿಯಾರ ಗ್ರಾಪಂನ ಬರ್ಖಾಸ್ತು ಗೊಳಿಸುವ ಬಗ್ಗೆ ಚರ್ಚೆ ವಿಷಯಸೂಚಿಯಲ್ಲಿದ್ದ ಹಿನ್ನೆಲೆಯಲ್ಲಿ ಒಳಗೆ ಸದಸ್ಯರು ಚರ್ಚೆ ನಡೆಸಿದರೆ ಹೊರಗೆ ಜ್ಯೋತಿ ಕೆಲವು ಬೆಂಬಲಿಗರೊಂದಿಗೆ ಬೆಳಗಿನಿಂದ ಧರಣಿ ನಡೆಸಿದರು.

  2015ರಲ್ಲಿ ಶಿರಿಯಾರ ಗ್ರಾಪಂನ ಅಧ್ಯಕ್ಷೆಯಾಗಿ ತಾನು ಆಯ್ಕೆಯಾಗಿದ್ದು, ಪ್ರಾಮಾಣಿಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಕರ್ತವ್ಯ ನಿರ್ವಹಿಸುವ ಗುರಿಯೊಂದಿಗೆ ಅಧಿಕಾರ ವಹಿಸಿಕೊಂಡಿದ್ದೆ. 13 ಸದಸ್ಯರ ಶಿರಿಯಾರ ಗ್ರಾಪಂನಲ್ಲಿ ತಾನೂ ಸೇರಿದಂತೆ ಐವರು ಕಾಂಗ್ರೆಸ್, 6 ಮಂದಿ ಬಿಜೆಪಿ ಹಾಗೂ ಇಬ್ಬರು ಪಕ್ಷೇತರರು ಸದಸ್ಯರಾಗಿದ್ದಾರೆ. ದಲಿತ ಮೀಸಲಾತಿಯಂತೆ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ತಾನು ಅಧ್ಯಕ್ಷೆಯಾಗಿ ಆಯ್ಕೆಯಾಗಿ ರುವುದಾಗಿ ಅವರು ತಿಳಿಸಿದರು.

ಆದರೆ ತನ್ನ ಪ್ರಾಮಾಣಿಕತೆಯನ್ನು ಸಹಿಸದ ಹಾಗೂ ಒಬ್ಬ ದಲಿತ ಮಹಿಳೆ ಅಧ್ಯಕ್ಷೆಯಾಗಿರುವುದನ್ನು ಸಹಿಸದ ಕೆಲವು ಸದಸ್ಯರು ಗ್ರಾಪಂ ಸಾಮಾನ್ಯ ಸಭೆಗಳಿಗೆ ಸತತವಾಗಿ (7-8ಬಾರಿ) ಗೈರುಹಾಜರಾಗಿ ಕೋರಂ ಇಲ್ಲದೇ ಗ್ರಾಮಸಭೆ ನಡೆಯದಂತೆ ನೋಡಿಕೊಂಡರು. ಈ ಮೂಲಕ ಗ್ರಾಪಂನ ಅಭಿವೃದ್ಧಿಗೆ ತೊಡರುಗಾಲಾದರು. ಸದಸ್ಯರು ತನಗೆ ಜಾತಿನಿಂದನೆ ಮಾಡಿದರು ಎಂದವರು ಪತ್ರಕರ್ತರೊಂದಿಗೆ ನೋವನ್ನು ತೋಡಿಕೊಂಡರು.

 ಶಿರಿಯಾರ ಗ್ರಾಪಂನ ಹಿಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಗಣಪ ಮೊಗವೀರ ಅವರು ಸದಸ್ಯರೊಂದಿಗೆ ಶಾಮೀಲಾಗಿ ತನಗೆ ತೊಂದರೆ ನೀಡಿದ್ದಲ್ಲದೇ ಹಲವು ಸಮಸ್ಯೆಗಳನ್ನು ಉಂಟು ಮಾಡಿದರು. ತನ್ನ ಯಾವುದೇ ಆದೇಶವನ್ನು ಪಾಲಿಸದೇ ಕಾನೂನು ಬಾಹಿರವಾಗಿ ವರ್ತಿಸಿದರು. ನೀರಿನ ಬಿಲ್ ಹಾಗೂ ವೋಚರ್‌ಗೆಏ ತನ್ನ ನಕಲಿ ಸಹಿ ಬಳಸಿ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಾನು ಅಮಾನತು ಮಾಡಿರುವುದಾಗಿ ಜ್ಯೋತಿ ವಿವರಿಸಿದರು. ಆನಂದ್ ನಾಯ್ಕೋ ಈಗ ಗ್ರಾಪಂನ ಹೊಸ ಪಿಡಿಓ ಆಗಿ ಕಾರ್ಯನಿರ್ವಹಿಸುತಿದ್ದಾರೆ.

ಗೈರುಹಾಜರಾದ ಸದಸ್ಯರ ವಿರುದ್ಧ ಅಧ್ಯಕ್ಷೆಯಾಗಿ ತಾನು ತಾಪಂ, ಜಿಪಂ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೂ, ಇದರಂತೆ ಕ್ರಮಕೈಗೊಳ್ಳುವುದನ್ನು ಬಿಟ್ಟು ತಾಪಂ ಹಾಗೂ ಜಿಪಂ ಅಧಿಕಾರಿಗಳು ಹಾಗೂ ಸದಸ್ಯರು ಶಿರಿಯಾರ ಗ್ರಾಪಂನ್ನೇ ಬರ್ಖಾಸ್ತುಗೊಳಿಸಲು ಮುಂದಾಗಿದೆ. ತಾಪಂನಲ್ಲಿ ಯಾವುದೇ ಕಾರ್ಯಸೂಚಿ ಇಲ್ಲದೇ ನಿರ್ಣಯ ಮಾಡಿ ಜಿಪಂಗೆ ಕಳುಹಿಸಿರುವುದು ಕಾನೂನು ಬಾಹಿರ ಎಂದವರು ದೂರಿದರು.

ಒಬ್ಬ ದಲಿತ ಮಹಿಳೆ ಗ್ರಾಪಂನಲ್ಲಿ ಅಧ್ಯಕ್ಷೆಯಾಗಿ ಮುಂದುವರಿಯುವುದನ್ನು ತಡೆಯಲು ಹಾಗೂ ಮೀಸಲಾತಿಯನ್ನು ಕಿತ್ತುಕೊಳ್ಳುವ ಹುನ್ನಾರದಿಂದ ಇಡೀ ಗ್ರಾಪಂನ್ನೇ ಬರ್ಖಾಸ್ತುಗೊಳಿಸಲು ಜಿಪಂ ಹೊರಟಿದೆ. ಇದು ದಲಿತ ವಿರೋಧಿ ನಿರ್ಣಯ ಎಂದವರು ಖಂಡಿಸಿದರು.

ಈ ಕುರಿತು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಪಕ್ಷೇತರ ಸದಸ್ಯರಿಬ್ಬರು ತನಗೆ ಸಂಪೂರ್ಣ ಬೆಂಬಲ ನೀಡಿದರೂ, ತನ್ನದೇ ಪಕ್ಷದ ಸದಸ್ಯರು ಬೆಂಬಲಿಸಲಿಲ್ಲ ಎಂದರು. ತನ್ನ ಅತ್ತೆ-ಮಾವನ ಸಹಕಾರದೊಂದಿಗೆ ಜ್ಯೋತಿ ಇಂದು ದಿನವಿಡೀ ಧರಣಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X