Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಡಿಯುವ ನೀರು ಪೂರೈಕೆಗೆ ಸಿಇಒ...

ಕುಡಿಯುವ ನೀರು ಪೂರೈಕೆಗೆ ಸಿಇಒ ಡಾ.ರಾಕೇಶ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Nov 2016 11:05 PM IST
share
ಕುಡಿಯುವ ನೀರು ಪೂರೈಕೆಗೆ ಸಿಇಒ ಡಾ.ರಾಕೇಶ್ ಸೂಚನೆ

ಶಿವಮೊಗ್ಗ, ನ. 29: ‘ಕುಡಿಯುವ ನೀರು ಸಮಸ್ಯೆ ತಲೆ ದೋರುವ ಗ್ರಾಮಗಳಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕ್ರಮಕೈಗೊಳ್ಳಬೇಕು. ಅನಿವಾರ್ಯವಿದ್ದೆಡೆ ಖಾಸಗಿ ಬೋರ್‌ವೆಲ್, ಬಾವಿಗಳನ್ನು ವಶಕ್ಕೆ ಪಡೆದು ನೀರು ಒದಗಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ನಿರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶಿವಮೊಗ್ಗ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಬೆಳೆ ಪರಿಹಾರ, ಕುಡಿಯವ ನೀರು ಪೂರೈಕೆ ಹಾಗೂ ಎನ್‌ಆರ್‌ಇಜಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಜರಗಿದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನೀರಿನ ಅಭಾವ ಹೆಚ್ಚಾಗಿರುವಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಬೇಕು. ಬೇಕಾದಲ್ಲಿ ಬೋರ್‌ವೆಲ್‌ಗಳನ್ನು ಕೊರೆಸಬಹುದು. ಇಲ್ಲವಾದಲ್ಲಿ ಖಾಸಗಿ ಬೋರ್‌ವೆಲ್, ಬಾವಿಗಳಿಂದ ನೀರು ಪೂರೈಸಲು ಅವಕಾಶಗಳಿರುವ ಕಾರಣ ಎಲ್ಲಾ ರೀತಿಯ ಅವಕಾಶಗಳನ್ನು ಬಳಸಿಕೊಂಡು ಜನರಿಗೆ ನೀರು ಒದಗಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಆಸ್ಪದ ನೀಡದೆ, ಗೊಂದಲಕ್ಕೀಡಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಡಾ. ಕೆ. ರಾಕೇಶ್ ಕುಮಾರ್ ಸಲಹೆ ನೀಡಿದರು.


ಪ್ರಸ್ತುತ ಬೇಸಿಗೆಯ ಅವಧಿಯಲ್ಲಿ, ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಬಹುದಾದ ಗ್ರಾಮಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೂಡ ಕೈಗೊಳ್ಳಲಾಗುತ್ತಿದೆ. ಅನುಷ್ಠಾನ ಹಂತದ ಲ್ಲಿರುವ ಕಾಮಗಾರಿಗಳನ್ನು ತ್ವರಿತಗತಿ ಯಲ್ಲಿ ಪೂರ್ಣಗೊಳಿಸಿ, ಅಗತ್ಯವಿರುವೆಡೆ ಹೊಸ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ತೀವ್ರ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಗ್ರಾಮಗಳಲ್ಲಿ ಅಗತ್ಯವಾದರೆ ಖಾಸಗಿ ವ್ಯಕ್ತಿಗಳ ಒಡೆತನದಲ್ಲಿರುವ ಬೋರ್‌ವೆಲ್, ಬಾವಿಗಳನ್ನು ವಶಕ್ಕೆ ಪಡೆದು ನಾಗರಿಕರಿಗೆ ನೀರು ಪೂರೈಕೆಗೆ ಮುಂದಾಗಬೇಕು. ಇದಕ್ಕೆ ಕಾನೂನಿನಲ್ಲಿ ಅವಕಾಶವಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ತಿಳುವಳಿಕೆ ನೀಡಲಾಗಿದೆ ಎಂದು ತಿಳಿಸಿದರು. ಕ್ರಮ: ಹೊಸದಾಗಿ ಕೊರೆಯಿಸಿದ ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಆಗಿರುವ ವಿಳಂಬದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂಗೆ ಪಾವತಿಸಬೇಕಾದ ಮೊತ್ತವನ್ನು ಕಾಲಮಿತಿಯಲ್ಲಿ ಸಂದಾಯ ಮಾಡುವಂತೆಯೂ ಗ್ರಾ.ಪಂ. ಅಧಿಕಾರಿಗಳಿಗೆ ನಿದೆರ್ೀಶನ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅನುದಾನದ ಲಭ್ಯತೆಯಿದೆ.

ಈ ಬಗ್ಗೆ ಮುಂದಿನ ತಿಂಗಳು ಗ್ರಾ.ಪಂ.ವಾರು ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.  
ಬೆಳೆ ಪರಿಹಾರ: ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಈಗಾಗಲೇ ರೈತರಿಂದ ಅರ್ಜಿ ಸ್ವೀಕರಿಸಿ ನಷ್ಟ ಅಂದಾಜು ನಡೆಸಲಾಗಿದೆ. ಬೆಳೆ ನಷ್ಟಕ್ಕೀಡಾದ ರೈತರು ಮುಂದಿನ ಬೇಸಾಯ ಕೈಗೊಳ್ಳಲು ಅಗತ್ಯವಾದ ಬಿತ್ತನೆ ಬೀಜ, ಔಷಧ ಖರೀದಿಗೆ ಸಹಾಯಧನ ವಿತರಣೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಡಾ. ಕೆ. ರಾಕೇಶ್‌ಕುಮಾರ್‌ರವರು ಮಾಹಿತಿ ನೀಡಿದ್ದಾರೆ.


ಬರಗಾಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರಿಯ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಕಾರ್ಮಿಕರಿಗೆ ಕಲ್ಪಿಸಲಾಗುತ್ತಿರುವ ಉದ್ಯೋಗದ ದಿನಗಳ ಹೆಚ್ಚಳಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಸರಕಾರದಿಂದ ಸೂಕ್ತ ಆದೇಶ ಬಂದ ಬಳಿಕ ಕ್ರಮ ಜರಗಿಸಲಾಗುವುದು ಎಂದರು. ಬರಗಾಲ: ಬರಗಾಲ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಜಾನುವಾರುಗಳಿಗೆ ಅಗತ್ಯವಾದ ಮೇವು ದಾಸ್ತಾನಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಇಒ ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾನುವಾರುಗಳಿಗೆ ಅಗತ್ಯ ಮೇವು ದಾಸ್ತಾನು ಮಾಡಬೇಕು. ಮೇವು ಕೊರತೆಯಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಸಂಬಂಧಿಸಿದ ಇಲಾಖಾಧಿಕಾರಿಗಳು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ಹಲವೆಡೆ ಹೊಸದಾಗಿ ಬೋರ್‌ವೆಲ್‌ಗಳನ್ನು ಕೊರೆಯಿಸಲಾಗಿದೆ.

ಆದರೆ, ಇಲ್ಲಿಯವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಪೂರೈಕೆಗೆ ಕ್ರಮಕೈಗೊಂಡಿಲ್ಲ. ಗ್ರಾ.ಪಂ. ಪಿಡಿಒಗಳು ಮೆಸ್ಕಾಂಗೆ ನಿಗದಿತ ಮೊತ್ತ ಪಾವತಿಸುವಲ್ಲಿ ವಿಳಂಬ ಮಾಡುತ್ತಿದ್ದಾರೆ. ಮೆಸ್ಕಾಂನವರು ವಿದ್ಯುತ್ ಪೂರೈಕೆಗೆ ಸಿದ್ಧವಿದ್ದರೂ ನಿಯಾಮಾನುಸಾರ ಮೆಸ್ಕಾಂಗೆ ಪಾವತಿಸಬೇಕಾದ ಶುಲ್ಕವನ್ನು ಗ್ರಾ.ಪಂ.ಗಳು ಪಾವತಿಸುತ್ತಿಲ್ಲ. ಇದರಿಂದ ಕುಡಿಯುವ ನೀರು ಪೂರೈಕೆಯ ಮೇಲೆ ಪರಿಣಾಮ ಬೀರುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಜಾನುವಾರುಗಳಿಗೆ ನೀರಿನ ತೊಟ್ಟಿ ನಿರ್ಮಿಸಿ’ಜಿಲ್ಲೆಯಲ್ಲಿ ಬಿಸಿಲ ತೀವ್ರತೆ ಹೆಚ್ಚಾಗಿದ್ದು, ಈಗಾಗಲೇ ಹಲವು ಗ್ರಾಮಗಳಲ್ಲಿ ಕೆರೆಕಟ್ಟೆಗಳು ಬರಿದಾಗಿವೆ. ಮತ್ತೆ ಹಲವೆಡೆ ಬರಿದಾಗುವ ಹಂತದಲ್ಲಿವೆ. ಇದರಿಂದ ಬೇಸಿಗೆಯ ಅವಧಿಯಲ್ಲಿ ಜಾನುವಾರುಗಳು ಕುಡಿಯುವ ನೀರಿನ ತೀವ್ರ ಅಭಾವಕ್ಕೆ ತುತ್ತಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಜಾನುವಾ ರುಗಳಿಗೆ ಪ್ರತ್ಯೇಕ ನೀರಿನ ತೊಟ್ಟಿ ನಿರ್ಮಾಣ ಮಾಡಿ, ನೀರು ಪೂರೈಸಲು ಕ್ರಮಕೈಗೊಳ್ಳಬೇಕು ಎಂದು ಕುಂಸಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಡಿಹಳ್ಳಿ ನಾಗರಾಜ್ ಸಿಇಒ ಅವರನ್ನು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X