ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು
ಕುಶಾಲನಗರ, ನ.29: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರ ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಸ್ಥಳೀಯ ಜನತಾ ಕಾಲೋನಿ ನಿವಾಸಿ ಮಂಜುನಾಥ (39)ಎಂದು ಗುರುತಿಸಲಾಗಿದೆ. ಮಂಜುನಾಥ ಕೂಲಿ ಕೆಲಸ ಮುಗಿಸಿ ಕೊಂಡು ಬೈಪಾಸ್ ರಸ್ತೆಯಲ್ಲಿ ಮನೆಯ ಕಡೆ ತೆರಳುತ್ತಿದ್ದ ವೇಳೆ ಸೋಮವಾರಪೇಟೆ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಸ್ಥಳಕ್ಕಾಗಮಿಸಿದ ಠಾಣಾಧಿಕಾರಿ ಜಗದೀಶ್ ಸ್ಥಳ ಪರಿಶೀಲನೆ ನಡೆಸಿ ಶವಾವನ್ನು ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದ ಶವಗಾರಕ್ಕೆ ಕೊಂಡೂಯ್ದು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ಬಸ್ ಚಾಲಕ ಪರಮೇಶ ಎಂಬಾತನನ್ನು ಪೊಲಿಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





