Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕಲ್ಲಿ ದುಡ್ಡಿಲ್ಲ: ಪತ್ನಿಯ...

ಬ್ಯಾಂಕಲ್ಲಿ ದುಡ್ಡಿಲ್ಲ: ಪತ್ನಿಯ ಅಂತ್ಯಕ್ರಿಯೆಗಾಗಿ ಕಾದು ಕುಳಿತ ಕಾರ್ಮಿಕ

ವಾರ್ತಾಭಾರತಿವಾರ್ತಾಭಾರತಿ30 Nov 2016 9:13 AM IST
share
ಬ್ಯಾಂಕಲ್ಲಿ ದುಡ್ಡಿಲ್ಲ: ಪತ್ನಿಯ ಅಂತ್ಯಕ್ರಿಯೆಗಾಗಿ ಕಾದು ಕುಳಿತ ಕಾರ್ಮಿಕ

ನೋಯ್ಡ, ನ.30: ನೋಟು ಅಮಾನ್ಯ ನಿರ್ಧಾರದ ಬಳಿಕ ದೇಶದಲ್ಲಿ ಉದ್ಭವಿಸಿರುವ ನೋಟು ಬಿಕ್ಕಟ್ಟು ಸ್ಥಿತಿ ಇನ್ನೂ ತಿಳಿಯಾಗಿಲ್ಲ. ಸ್ಥಳೀಯ ಬ್ಯಾಂಕಿನಲ್ಲಿ ಹಣ ಸಿಕ್ಕದ ಪರಿಣಾಮವಾಗಿ ಇಲ್ಲಿನ ಜೆ.ಜೆ.ಕ್ಲಸ್ಟರ್‌ನ ದಿನಗೂಲಿ ಕಾರ್ಮಿಕನೊಬ್ಬ ತನ್ನ ಪತ್ನಿಯ ಶವಸಂಸ್ಕಾರಕ್ಕೆ ಕಾದು ಕುಳಿತುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

65 ವರ್ಷದ ಮುನ್ನಿಲಾಲ್, ಪ್ಲಾಸ್ಟಿಕ್ ಡೇರೆಯಲ್ಲಿ ಪತ್ನಿಯ ಶವ ಪಕ್ಕಕ್ಕಿಟ್ಟುಕೊಂಡು ಕಾಯುತ್ತಿದ್ದ ದೃಶ್ಯ ಹೃದಯವಿದ್ರಾವಕವಾಗಿತ್ತು. ಹೊಟ್ಟೆ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ಫೂಲನ್‌ದೇವಿ (61) ನೋಯ್ಡ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದರು.

"ಮುಂಜಾನೆ 8ಕ್ಕೆ ನಾನು ಧರ್ಮಶೀಲ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ದೆ. ಅಲ್ಲಿಂದ ಮತ್ತೊಂದು ಖಾಸಗಿ ಆಸ್ಪತ್ರೆಗೆ ಹೋಗಲು ಸೂಚಿಸಿದರು. ಆಟೊದಲ್ಲಿ ಅಲ್ಲಿ ಹೋದ ಬಳಿಕ ಮಧ್ಯಾಹ್ನ 2ರ ವೇಳೆಗೆ ಆಕೆ ಮೃತಪಟ್ಟಳು. ಸಿರಿಂಜ್, ಆಹಾರ ಹಾಗೂ ಔಷಧಿಗೆ 600-700 ರೂಪಾಯಿ ನೀಡಬೇಕಾಯಿತು" ಎಂದು ಲಾಲ್ ವಿವರಿಸಿದರು.

ಲಾಲ್ ಸೋಮವಾರ ಸಂಜೆ ತನ್ನ ಒಂಟಿ ಕೊಠಡಿಯ ಮನೆಗೆ ಮರಳಿದಾಗ, ಪತ್ನಿಯ ಅಂತ್ಯಸಂಸ್ಕಾರಕ್ಕೆ ಹಣ ಇರಲಿಲ್ಲ. ತಕ್ಷಣ ಸೆಕ್ಟರ್ 9ರಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ತೆರಳಿದರು. ಅಲ್ಲಿ ಮಗನ ಖಾತೆ ಇತ್ತು. "ಇಬ್ಬರು ಮಕ್ಕಳು ಉತ್ತರಪ್ರದೇಶದ ಗೊಂಡಾ ಜಿಲ್ಲೆಯಿಂದ ರೈಲಿನಲ್ಲಿ ಬರುತ್ತಿದ್ದಾರೆ. ಒಬ್ಬ ಮಗನ ಖಾತೆಯಲ್ಲಿ 16 ಸಾವಿರ ರೂಪಾಯಿ ಇದೆ. ಹಲವು ಗಂಟೆ ಕಾಲ ಬ್ಯಾಂಕಿನಲ್ಲಿ ಕಾದರೂ, ಬ್ಯಾಂಕ್ ಪ್ರಬಂಧಕ ನಗದು ಇಲ್ಲ ಎಂದು ಹೇಳಿ ವಾಪಸ್ ಕಳುಹಿಸಿದರು. ನಾನು ಪರಿಸ್ಥಿತಿ ವಿವರಿಸಿದರೂ ಯಾರೂ ನೆರವಿಗೆ ಬರಲಿಲ್ಲ" ಎಂದು ಹೇಳಿದರು.

ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಸೋಮವಾರ ನಗದು ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಮರುದಿನ ಬೆಳಗ್ಗೆ 10ಕ್ಕೆ ಲಾಲ್ ಅವರ ನೆರೆಯವರು ಬ್ಯಾಂಕಿಗೆ ಹೋದರೂ ನಗದು ಇಲ್ಲ ಎಂಬ ಉತ್ತರವೇ ಬಂತು. ಅಂತಿಮವಾಗಿ ಪೊಲೀಸ್ ಅಧಿಕಾರಿಯೊಬ್ಬರು 2,500 ರೂಪಾಯಿ ನೀಡಿದರು. ರಾಜಕಾರಣಿಯೊಬ್ಬರು 5 ಸಾವಿರ ರೂ. ನೆರವು ನೀಡಿದರು. ಆದರೆ ಬೇರೆಯವರಿಂದ ಪಡೆದ ಹಣದಲ್ಲಿ ಪತ್ನಿಯ ಅಂತ್ಯಸಂಸ್ಕಾರ ನೆರವೇರಿಸುವುದನ್ನು ಆಕೆ ಇಷ್ಟಪಡಲಾರಳು. ಅಂತಿಮವಾಗಿ ಜಿಲ್ಲಾಡಳಿತ ಬ್ಯಾಂಕಿಗೆ ಹಣದ ವ್ಯವಸ್ಥೆ ಮಾಡಿತು. ಮಗನ ಖಾತೆಯಿಂದ 15 ಸಾವಿರ ರೂಪಾಯಿ ತೆಗೆದಿದ್ದೇವೆ. ಬುಧವಾರ ಬೆಳಗ್ಗೆ ಅಂತ್ಯಸಂಸ್ಕಾರ ನೆರವೇರಿಸುತ್ತೇವೆ ಎಂದು ಅವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X