ಶಾಲಾ ವಾಹನಕ್ಕೆ ಟ್ರಾಕ್ಟರ್ ಢಿಕ್ಕಿ: ವಿದ್ಯಾರ್ಥಿಗಳ ಸಹಿತ 12 ಮಂದಿಗೆ ಗಾಯ

ಬಾಗಲಕೋಟೆ, ನ.30: ಶಾಲಾ ವಾಹನ ಮತ್ತು ಕಬ್ಬು ಸಾಗಾಟದ ಟ್ರಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಕ್ಕಳು ಸೇರಿದಂತೆ 12 ಮಂದಿ ಗಾಯಗೊಂಡ ಘಟನೆ ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬಾಗಲಕೋಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲಾ ವಾಹನದಲ್ಲಿದ್ದವರು ಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಅಸ್ಕಿ ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ಇವರು ಸಿಂದಗಿಯಿಂದ ಪ್ರವಾಸ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ಶಾಲಾ ವಾಹನವು ಎದುರಿನಿಂದ ಬರುತ್ತಿದ್ದ ಕಬ್ಬು ಸಾಗಾಟದ ಟ್ರಾಕ್ಟರ್‌ಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ಮಕ್ಕಳು ಸೇರಿದಂತೆ 12 ಮಂದಿ ಗಾಯಗೊಂಡರು ಎಂದು ತಿಳಿದುಬಂದಿದೆ.
Next Story





