Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಖಾನೆಗಳ ಕಾರ್ಮಿಕರಿಗೆ ನಗದು ಹಣದ...

ಕಾರ್ಖಾನೆಗಳ ಕಾರ್ಮಿಕರಿಗೆ ನಗದು ಹಣದ ಬದಲು ಕೂಪನ್ ವಿತರಣೆ

ನೋಟು ನಿಷೇಧ ಎಫೆಕ್ಟ್

ವಾರ್ತಾಭಾರತಿವಾರ್ತಾಭಾರತಿ30 Nov 2016 6:59 PM IST
share
ಕಾರ್ಖಾನೆಗಳ ಕಾರ್ಮಿಕರಿಗೆ ನಗದು ಹಣದ ಬದಲು ಕೂಪನ್ ವಿತರಣೆ

ಆಗ್ರಾ,ನ.30: ಕೇಂದ್ರದ ನೋಟು ನಿಷೇಧ ಕ್ರಮವು ಜನಸಾಮಾನ್ಯರಿಗೆ ಬಹಳಷ್ಟು ಸಂಕಷ್ಟಗಳನ್ನುಂಟು ಮಾಡಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆಗ್ರಾದಲ್ಲಿನ ಶೂ ತಯಾರಿಕೆ ಘಟಕಗಳಲ್ಲಿ ದುಡಿಯುತ್ತಿರುವ ಸುಮಾರು 50,000 ಕಾರ್ಮಿಕರು ತಮ್ಮ ವಾರದ ಸಂಬಳವನ್ನು ಪಡೆಯಲು ಪರದಾಡುತ್ತಿರುವುದು ಇದಕ್ಕೊಂದು ನಿದರ್ಶನವಾಗಿದೆ.

 ದಿನಗೂಲಿ ಕಾರ್ಮಿಕರಿಗೆ ನೀಡಲು ನಗದು ಹಣವಿಲ್ಲ. ಹೀಗಾಗಿ ಶೂ ಫ್ಯಾಕ್ಟರಿಗಳ ಮಾಲಿಕರು ಸೂಪರ್ ಮಾರ್ಕೆಟ್‌ಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ತಮ್ಮ ಕಾರ್ಮಿಕರಿಗೆ ಕೂಪನ್‌ಗಳನ್ನು ನೀಡುತ್ತಿದ್ದಾರೆ. ಕಾರ್ಮಿಕರು ಈ ಕೂಪನ್‌ಗಳನ್ನು ಸೂಪರ್ ಮಾರ್ಕಟ್‌ಗಳಲ್ಲಿ ನೀಡಿ ತಮ್ಮ ದೈನಂದಿನ ಅಗತ್ಯ ಸಾಮಗ್ರಿಗಳನ್ನು ಖರೀದಿಸಬಹುದಾಗಿದೆ.

ಆದರೆ ಈ ಸೂಪರ್ ಮಾರ್ಕೆಟ್‌ಗಳಲ್ಲಿ ತುತ್ತಿನ ಚೀಲವನ್ನು ತುಂಬಿಕೊಳ್ಳಲು ಅಗತ್ಯವಾಗಿರುವ ಆಹಾರ ಧಾನ್ಯಗಳ ಬೆಲೆ ಸ್ಥಳೀಯ ಇತರ ಅಂಗಡಿಗಳಿಗಿಂತ ದುಬಾರಿಯಾಗಿರುವುದು ಈ ಕಾರ್ಮಿಕರನು ಇನ್ನಷ್ಟು ಕಂಗೆಡಿಸಿದೆ.

 ಅಲ್ಲದೆ ಕಾರ್ಮಿಕನ ಬಳಿ 2000ರೂ ಕೂಪನ್ ಇದ್ದರೆ ಆತ ಅಷ್ಟೂ ಹಣಕ್ಕೆ ಸೂಪರ್‌ಮಾರ್ಕೆಟ್‌ನಿಂದ ಸಾಮಗ್ರಿಗಳನ್ನು ಖರೀದಿಸುವ ಅನಿವಾರ್ಯತೆಯಿದೆ. ಏಕೆಂದರೆ ಈ ಸೂಪರ್ ಮಾರ್ಕೆಟ್‌ಗಳು ಚಿಲ್ಲರೆ ವಾಪಸ್‌ಕೊಡಲು ನಿರಾಕರಿಸುತ್ತಿವೆ.

ಕಾರ್ಮಿಕರ ಬವಣೆ ಆಗ್ರಾಕ್ಕೆ ಮಾತ್ರ ಸೀಮಿತವಲ್ಲ. ದಿಲ್ಲಿಯಲ್ಲಿನ ಹಣ್ಣು ಮತ್ತು ತರಕಾರಿ ಮಂಡಿಗಳು ಈಗಾಗಲೆ ನೋಟು ನಿಷೇಧದಿಂದಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿವೆ. ಸಗಟು ಮಾರುಕಟ್ಟೆಗಳಲ್ಲಿ ಮಾರಾಟವು ಕುಸಿದಿದ್ದು,ಬದುಕಿನ ಬಂಡಿಯನ್ನು ಸಾಗಿಸಲು ದಿನಗೂಲಿ ಕಾರ್ಮಿಕರು ಒದ್ದಾಡುತ್ತಿದ್ದಾರೆ.

    ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಹಣ್ಣು ಮತ್ತು ತರಕಾರಿಗಳ ಸಗಟು ಮಾರುಕಟ್ಟೆಯಾಗಿರುವ ಆಜಾದ್‌ಪುರ ಮಂಡಿಯಲ್ಲಿ ವಲಸಿಗ ಕಾರ್ಮಿಕರು ಕೆಲಸಕ್ಕಾಗಿ ಅಥವಾ ಬರತಕ್ಕ ಹಣಕ್ಕಾಗಿ ಕಾಯುತ್ತ ಸೋಮಾರಿಗಳಂತೆ ಕುಳಿತಿರುವ ದೃಶ್ಯಗಳು ಸಾಮಾನ್ಯವಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X