ವಿಶ್ವ ವಿಕಲಚೇತನರ ದಿನಾಚರಣೆ: ಕ್ರೀಡಾಕೂಟ
ಚಿಕ್ಕಮಗಳೂರು, ನ.30: ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತಿತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಡಿ.3 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ಪ್ರಭಾವತಿ ಎಂ.ಹಿರೇಮಠ್ ಕಾನೂನು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಉದ್ಘಾಟಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಚೈತ್ರಾಶ್ರೀ ಮಾಲತೇಶ್ ಕ್ರೀಡಾಕೂಟಗಳಿಗೆ ಚಾಲನೆ ನೀಡಲಿದ್ದು,ಶಾಸಕ ಸಿ.ಟಿ ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಸಂಸದ ಎಚ್.ಡಿ. ದೇವೇಗೌಡ, ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ,ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಶಾಸಕರುಗಳಾದ ಡಿ.ಎನ್.ಜೀವರಾಜ್, ಬಿ.ಬಿ ನಿಂಗಯ್ಯ, ವೈ.ಎಸ್.ವಿ ದತ್ತ, ಜಿ.ಎಚ್.ಶ್ರೀನಿವಾಸ್, ಎಂಎಲ್‌ಸಿಗಳಾದ ಮೋಟಮ್ಮ ಮತ್ತು ಎಂ.ಕೆ ಪ್ರಾಣೇಶ್, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ನಿಗಮದ ಅಧ್ಯಕ್ಷ ಎ.ಎನ್ ಮಹೇಶ್,ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಪಿ ಮೋಹನ್, ನಗರಸಭೆ ಅಧ್ಯಕ್ಷೆ ಕವಿತಾ ಶೇಖರ್, ಸಿಡಿಎ ಅಧ್ಯಕ್ಷ ಡಿ.ಎಸ್ ಚಂದ್ರೇಗೌಡ, ತಾಪಂ ಅಧ್ಯಕ್ಷ ಈ.ಮಹೇಶ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬೆಳವಾಡಿ ಮತ್ತಿತರರು ಭಾಗವಹಿಸಲಿದ್ದಾರೆ.







