ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ತೀರ್ಥಹಳ್ಳಿ , ನ.30: ತೀರ್ಥಹಳ್ಳಿಯ ಡಾ. ಅನಂತಮೂರ್ತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಗೌರಿ ಆರ್.ಕಾರಂತ್, ರಾಜ್ಯ ಮಟ್ಟದ 17 ವರ್ಷದ ವಯೋಮಿತಿಯೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ರಾಮನಗರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಈಕೆ ದಿಲ್ಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟ ಸ್ಪರ್ಧೆಗೆ ರಾಜ್ಯದಿಂದ ಆಯ್ಕೆಯಾಗಿದ್ದಾಳೆ. ಪ್ರೌಢಶಾಲೆಯ 8ನೆ ತರಗತಿ ವಿದ್ಯಾರ್ಥಿನಿಯಾದ ಈಕೆ ತಾಲೂಕು, ಜಿಲ್ಲಾ, ವಿಭಾಗ ಮತ್ತು ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿದ್ದಳು.
ಈಕೆಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Next Story





