ಅಕ್ಷಯ್ ಅಮರ್ ರಹೇ..!
ಜಮ್ಮು ಕಾಶ್ಮೀರದ ನಗ್ರೋಟಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಬೆಂಗಳೂರಿನ ಮೇಜರ್ ಅಕ್ಷಯ್ ಗಿರೀಶ್‌ಕುಮಾರ್(31) ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕದ ವಾಯು ನೆಲೆಗೆ ತರಲಾಯಿತು. ಈ ವೇಳೆ ಸೇನೆಯ ಹಿರಿಯ ಅಧಿಕಾರಿಗಳು, ಸಚಿವರು, ಪ್ರಮುಖ ಗಣ್ಯರು ಅಗಲಿದ ವೀರಯೋಧ ಅಕ್ಷಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಸಾವಿರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ಸಾಗಿ ಬಳಿಕ ಹೆಬ್ಬಾಳದ ಚಿರಶಾಂತಿ ವಿದ್ಯುತ್ ಚಿತಾಗಾರದಲ್ಲಿ ಅಕ್ಷಯ್ ಅವರ ಅಂತ್ಯಕ್ರಿಯೆ ನಡೆಸಲಾಯಿತು.
Next Story





