Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನರೇಂದ್ರ ಮೋದಿ ಆ್ಯಪ್‌ಗೂ ಕನ್ನ

ನರೇಂದ್ರ ಮೋದಿ ಆ್ಯಪ್‌ಗೂ ಕನ್ನ

70 ಲಕ್ಷ ಬಳಕೆದಾರರ ದತ್ತಾಂಶ ಅಪಾಯದಲ್ಲಿ

ವಾರ್ತಾಭಾರತಿವಾರ್ತಾಭಾರತಿ2 Dec 2016 10:47 PM IST
share
ನರೇಂದ್ರ ಮೋದಿ ಆ್ಯಪ್‌ಗೂ ಕನ್ನ

ಹೊಸದಿಲ್ಲಿ,ಡಿ.2: ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಟ್ವಿಟರ್ ಖಾತೆಗಳು ಸೈಬರ್‌ಖದೀಮರ ಹ್ಯಾಕಿಂಗ್‌ಗೆ ತುತ್ತಾದ ಬೆನ್ನಲ್ಲೇ, ನರೇಂದ್ರ ಮೋದಿಯವರ ಪ್ರಸಿದ್ಧ ಮೊಬೈಲ್ ಆ್ಯಪ್‌ಗೂ ಕೂಡಾ ಭದ್ರತಾ ಅಪಾಯ ಎದುರಾಗಿದೆ. ಈ ಆ್ಯಪ್‌ನ ದತ್ತಾಂಶ ಭದ್ರತೆಗಿರುವ ಅಪಾಯದ ಬಗ್ಗೆ ಗಮನಸೆಳೆಯುವ ಉದ್ದೇಶದಿಂದ ಮೊಬೈಲ್ ಆ್ಯಪ್ ಡೆವಲಪರ್ ಒಬ್ಬರು ಅದನ್ನು ಹ್ಯಾಕ್ ಮಾಡಿದ್ದಾರೆ.
ಮುಂಬೈ ನಿವಾಸಿ 22 ವರ್ಷ ವಯಸ್ಸಿನ ಜಾವೇದ್ ಖತ್ರಿ ಎಂಬವರು ತಾನು ನರೇಂದ್ರ ಮೋದಿಯವರ ಮೊಬೈಲ್ ಆ್ಯಪ್ ಅನ್ನು ಹ್ಯಾಕ್ ಮಾಡಿರುವುದಾಗಿ ಘೋಷಿಸಿದ್ದಾರೆ. ತನಗೆ ಈ ಆ್ಯಪ್ ಅನ್ನು ಹ್ಯಾಕ್ ಮಾಡಲು ಕೇವಲ 15-20 ನಿಮಿಷಗಳು ಬೇಕಾದವೆಂದು ಅವರು ಹೇಳಿಕೊಂಡಿದ್ದಾರೆ. ಈ ಮೊಬೈಲ್ ಆ್ಯಪ್‌ಗೆ ಹಲವು ಸ್ತರದ ಭದ್ರತೆಯಿದ್ದರೂ, ಅವುಗಲ್ಲಿ ಕೆಲವೊಂದು ನ್ಯೂನತೆಗಳಿದ್ದುದರಿಂದ ತನಗೆ ಅದನ್ನು ಸುಲಭವಾಗಿ ಹ್ಯಾಕ್ ಮಾಡಲು ಸಾಧ್ಯವಾಯಿತೆಂದು ಅವರು ಹೇಳಿಕೊಂಡಿದ್ದಾರೆ.
ಈ ಆ್ಯಪ್‌ನ ಯಾವುದೇ ಬಳಕೆದಾರನ ಖಾಸಗಿ ದತ್ತಾಂಶಗಳನ್ನು ಪಡೆಯಲು ತನಗೆ ಸಾಧ್ಯವಾಗಿದೆಯೆಂದು ಅವರು ಹೇಳಿದ್ದಾರೆ. ಬಳಕೆದಾರ ಫೋನ್‌ನಂಬರ್,ಇ ಮೇಲ್, ಹೆಸರು, ಸ್ಥಳ, ಆಸಕ್ತಿಗಳು ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ತನಗೆ ಸಾಧ್ಯವಾಗಿದೆ. ಸ್ಮೃತಿ ಇರಾನಿಯವರಂತಹ ಸಚಿವರ ಫೋನ್ ನಂಬರ್ ಹಾಗೂ ಇಮೇಲ್ ಐಡಿಗಳನ್ನು ಕೂಡಾ ತನಗೆ ಪಡೆಯಲು ಸಾಧ್ಯವಾಗಿದೆ ಎಂದು ಜಾವೇದ್ ಖತ್ರಿ ತಿಳಿಸಿದ್ದಾರೆ.
ಈ ಆ್ಯಪ್‌ನಲ್ಲಿರುವ ಲೋಪಗಳನ್ನು ನಿರ್ಲಕ್ಷಿಸಿದಲ್ಲಿ, ಅದನ್ನು ಬಳಸುತ್ತಿರುವ 70 ಲಕ್ಷಕ್ಕೂ ಅಧಿಕ ಬಳಕೆದಾರರ ಖಾಸಗಿತನವು ಅಪಾಯದಲ್ಲಿದೆಯೆಂದು ಅವರು ಹೇಳಿದ್ದಾರೆ. ತನ್ನ ಬಿಡುವಿನ ವೇಳೆಯಲ್ಲಿ ಆ್ಯಪ್‌ಗಳಲ್ಲಿರುವ ಭದ್ರತಾ ನ್ಯೂನತೆಗಳ ಬಗ್ಗೆ ತಾನು ಸಂಶೋಧನೆ ನಡೆಸುತ್ತಿರುವುದಾಗಿ ಹೇಳುವ ಜಾವೇದ್, ಈಗಾಗಲೇ ತಾನು ಹಲವಾರು ಆ್ಯಪ್‌ಗಳು ಹಾಗೂ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿರುವುದಾಗಿ ಹೇಳಿದ್ದಾರೆ.
  ಜಾವೇದ್ ಮೋದಿಯವರ ಆ್ಯಪ್ ಮೂಲಕ ಈಶಾನ್ಯ ಭಾರತ ಅಭಿವೃದ್ಧಿ ಖಾತೆಯ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಹಾಗೂ ಪ್ರಧಾನಿ ಕಾರ್ಯಾಲಯದ ಸಂಪರ್ಕ ಸಂಖ್ಯೆಯನ್ನು ಕೂಡಾ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X