Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಪ್ತವಾಗಿ ನಡೆಯುತ್ತಿದೆಯೇ ಹಣ...

ಗುಪ್ತವಾಗಿ ನಡೆಯುತ್ತಿದೆಯೇ ಹಣ ಪರಿವರ್ತನೆಯ ದಂಧೆ?

ವಾರ್ತಾಭಾರತಿವಾರ್ತಾಭಾರತಿ3 Dec 2016 10:40 PM IST
share
ಗುಪ್ತವಾಗಿ ನಡೆಯುತ್ತಿದೆಯೇ ಹಣ ಪರಿವರ್ತನೆಯ ದಂಧೆ?

ಬಿ. ರೇಣುಕೇಶ್
ಶಿವಮೊಗ್ಗ, ಡಿ. 3: ಕೇಂದ್ರ ಸರಕಾರ 500 ಹಾಗೂ 1000 ರೂ. ಮುಖಬೆಲೆಯ ಹಳೆಯ ನೋಟುಗಳ ಚಲಾವಣೆ ರದ್ದುಗೊಳಿಸಿದ ನಂತರ, ಶಿವಮೊಗ್ಗ ನಗರದಲ್ಲಿ ಕೆಲ ಕಾಳಧನಿಕರು ತಮ್ಮ ಬಳಿಯಿರುವ ಅಪಾರ ಪ್ರಮಾಣದ ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಪರಿವರ್ತಿಸಲು ಗುಪ್ತವಾಗಿ ವಿವಿಧ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಮಾಹಿತಿಗಳಿದ್ದು, ಇದೊಂದು ದೊಡ್ಡ ದಂಧೆಯಾಗಿ ನಡೆಯುತ್ತಿರುವ ಮಾತುಗಳು ಸಾರ್ವಜನಿಕರ ವಲಯದಿಂದ ಕೇಳಿಬರುತ್ತಿದೆ.

ಕೆಲ ಕಾಳಧನಿಕರು ತಮ್ಮ ಬಳಿಯಿರುವ ರದ್ದುಗೊಂಡಿರುವ ನೋಟುಗಳನ್ನು ಗುಪ್ತವಾಗಿ ಬೇರೆಯವರಿಗೆ ಹಂಚಿಕೆ ಮಾಡುತ್ತಿದ್ದು, 
ಲಕ್ಷ ರೂ. ಹಳೆಯ ನೋಟುಗಳನ್ನು ಪರಿವರ್ತನೆ ಮಾಡಿಕೊಟ್ಟರೆ 25 ರಿಂದ 30 ಸಾವಿರ ರೂ.ವನ್ನು ಕಮೀಷನ್ ಆಗಿ ನೀಡುತ್ತಿದ್ದಾರೆನ್ನಲಾಗಿದೆ. ಕಮೀಷನ್ ಆಸೆಗಾಗಿ ಕೆಲವರು ನೋಟು ಪರಿವರ್ತನೆಯ ದಂಧೆಗೆ ಕೈ ಜೋಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತೆ ಕೆಲವರು ಹಳೆಯ ನೋಟುಗಳನ್ನು ಚಿನ್ನ ಖರೀದಿಗೆ ಬಳಕೆ ಮಾಡುತ್ತಿದ್ದಾರೆ. 10 ಗ್ರಾಂ ಹಳೆಯ ಬಂಗಾರಕ್ಕೆ 35 ರಿಂದ 45 ಸಾವಿರ ರೂ. ಕೊಟ್ಟು ಖರೀದಿಸುತ್ತಿದ್ದಾರೆ. ಕಾಳಧನವನ್ನು ಹಳೆಯ ಚಿನ್ನಾಭರಣಗಳ ಮೇಲೆ ಹೂಡಿಕೆ ಮಾಡುವ ಮೂಲಕ ಬಿಳಿಯಾಗಿಸುವ ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದಾರೆ.

ದುಪ್ಪಟ್ಟು ಹಣ ಸಿಗುವ ಆಸೆಯಿಂದ ಕೆಲವರು ತಮ್ಮ ಬಳಿಯಿರುವ ಹಳೆಯ ಚಿನ್ನಾಭರಣಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಚಿನ್ನಾಭರಣಗಳ ಅಂಗಡಿಗಳಲ್ಲಿ ಭಾರೀ ಪ್ರಮಾಣದಲ್ಲಿ ಚಿನ್ನಾಭರಣ ಖರೀದಿ ಮಾಡುವವರ ಮೇಲೆ ಆದಾಯ ತೆರಿಗೆ ಇಲಾಖೆ ಕಣ್ಣಿಟ್ಟಿದೆ. ಚಿನ್ನಾಭರಣಗಳ ಅಂಗಡಿಗಳಲ್ಲಿನ ವ್ಯವಹಾರದ ಮೇಲೆ ಗಮನಹರಿಸಿದೆ.

ಈ ಹಿನ್ನೆಲೆಯಲ್ಲಿ ಕಾಳಧನಿಕರು ತಮ್ಮಲ್ಲಿರುವ ಕಪ್ಪು ಹಣವನ್ನು ಹೊಸ ಚಿನ್ನಾಭರಣಕ್ಕೆ ಬದಲಾಗಿ ನಾಗರಿಕರಿಂದ ಹಳೆಯ ಚಿನ್ನಾಭರಣ ಖರೀದಿಸುವ ವ್ಯವಹಾರಕ್ಕಿಳಿದಿದ್ದಾರೆ. ಸರಕಾರ ಚಾಪೆ ಕೆಳಗೆ ನುಸುಳಿದರೆ, ಕಾಳಧನಿಕರು ರಂಗೋಲಿಯ ಕೆಳಗೆ ನುಸುಳುವ ಕೆಲಸವನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆರೋಪ ನಿಜವೇ?: ನೋಟು ರದ್ದುಗೊಳಿಸುವ ಆದೇಶದ ನಂತರ ನಾಗರಿಕರು ತಮ್ಮೆಲ್ಲ ಕೆಲಸ ಕಾರ್ಯ ಬಿಟ್ಟು ಬ್ಯಾಂಕ್, ಎಟಿಎಂಗಳಲ್ಲಿ ಸಾವಿರ ರೂ. ವಿತ್ ಡ್ರಾ ಮಾಡಲು ಹರಸಾಹಸ ಪಡುತ್ತಿದ್ದಾರೆ.

ಮತ್ತೊಂದೆಡೆ ಕೆಲವರ ಬಳಿ ಹೊಸ ಮುಖಬೆಲೆಯ 2000, 500 ಹಾಗೂ ಇತರ ನೋಟುಗಳು ಭಾರೀ ದೊಡ್ಡ ಸಂಖ್ಯೆಯಲ್ಲಿ ಜಮಾವಣೆಯಾಗಿರುವ ಮಾಹಿತಿಗಳಿದ್ದು, ಇಂತಹವರು ಕಮೀಷನ್ ಆಧಾರದ ಮೇಲೆ ಹಳೆಯ ನೋಟುಗಳನ್ನು ಪಡೆದು ಹೊಸ ನೋಟು ಕೊಡುವ ದಂಧೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ ಬ್ಯಾಂಕ್ ಅಧಿಕಾರಿಗಳಿಗೆ ಹಣದ ಆಮಿಷವೊಡ್ಡಿ ಅಥವಾ ಬ್ಯಾಂಕ್‌ಗಳ ಇತರ ಮಾರ್ಗಗಳ ಮೂಲಕ ಕೆಲ ಕಾಳಧನಿಕರು ತಮ್ಮ ಬಳಿಯಿರುವ ಕಪ್ಪು ಹಣವನ್ನು ಹೊಸ ನೋಟುಗಳಿಗೆ ಪರಿವರ್ತಿಸುವ ಕೆಲಸ ನಡೆಸುತ್ತಿದ್ದಾರೆನ್ನಲಾಗಿದ್ದು, ಇದು ಅತ್ಯಂತ ಗುಪ್ತವಾಗಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಈ ಆರೋಪ ನಿಜವೇ? ಸುಳ್ಳೇ? ಎಂಬುವುದು ಇನ್ನಷ್ಟೆ ತಿಳಿದುಬರಬೇಕಾಗಿದೆ.

ನಾಗರಿಕರ ಅನುಮಾನ: 
 ಇತ್ತೀಚೆಗೆ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಇಬ್ಬರು ಪ್ರಭಾವಿ ಅಧಿಕಾರಿಗಳ ಬಳಿ ಕೋಟ್ಯಂತರ ರೂ. ವೌಲ್ಯದ 2000 ರೂ. ಮುಖಬೆಲೆಯ ಹೊಸ ನೋಟುಗಳು ಲಭ್ಯವಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಒಂದೆಡೆ ಕೇಂದ್ರ ಸರಕಾರ ಪ್ರತಿಯೋರ್ವ ಗ್ರಾಹಕನಿಗೆ ವಾರದಲ್ಲಿ 24 ಸಾವಿರ ರೂ. ವಿತ್‌ಡ್ರಾ ಮಾಡಲು ಅವಕಾಶ ಕಲ್ಪಿಸಿದೆ. ಆದರೆ ಕೆಲ ಬ್ಯಾಂಕ್‌ಗಳಲ್ಲಿ ಗ್ರಾಹಕರಿಗೆ ಮೊತ್ತ ಕೂಡ ಲಭ್ಯವಾಗುತ್ತಿಲ್ಲ. ಆದರೆ ಕೆಲವೇ ವಾರಗಳಲ್ಲಿ ಅಧಿಕಾರಿಗಳ ಬಳಿ ಕೋಟ್ಯಂತರ ರೂ. ಪ್ರಮಾಣದಲ್ಲಿ ಹೊಸ ನೋಟುಗಳು ಪತ್ತೆಯಾಗಿದ್ದು, ನಿಜಕ್ಕೂ ಆಶ್ಚರ್ಯಕರ ಸಂಗತಿಯಾಗಿದೆ. ಇದೆಲ್ಲ ಗಮನಿಸಿದರೆ ಕೆಲ ಬ್ಯಾಂಕ್ ಅಧಿಕಾರಿಗಳು ಕೂಡ ಕಾಳಧನಿಕರ ಜೊತೆ ಕೈಜೋಡಿಸಿರುವ ಅನುಮಾನಗಳು ವ್ಯಕ್ತವಾಗುತ್ತಿವೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಗಮನಹರಿಸಬೇಕಾಗಿದೆ.

ಜನಸಾಮಾನ್ಯರಿಗೆ ಬ್ಯಾಂಕ್‌ಗಳ ಮೂಲಕ ಸುಲಭವಾಗಿ ಹೊಸ ನೋಟುಗಳು ಲಭ್ಯವಾಗುವ ವ್ಯವಸ್ಥೆ ಮಾಡಬೇಕಾಗಿದೆ ಎಂದು ಗೃಹಿಣಿ ನಾಗರತ್ನಾ ಎಂಬುವರು ಆಗ್ರಹಿಸುತ್ತಾರೆ. ಒಟ್ಟಾರೆ ಕಾಳಧನಿಕರು ತಮ್ಮ ಬಳಿಯಿರುವ ಕಪ್ಪು ಹಣವನ್ನು ಬಿಳಿಯಾಗಿಸಲು ಇನ್ನಿಲ್ಲದ ಕಾರ್ಯತಂತ್ರಗಳನ್ನು ನಡೆಸುತ್ತಿದ್ದಾರೆ. ಹತ್ತು ಹಲವು ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಸಂಬಂಧಿಸಿದ ಇಲಾಖೆಗಳು ಮತ್ತಷ್ಟು ಚುರುಕಾಗುವ ಮೂಲಕ ಕಾಳಧನಿಕರು ಕಂಡುಕೊಂಡಿರುವ ಅಡ್ಡ ಮಾರ್ಗಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚುವ ಕೆಲ ಮಾಡಬೇಕಾಗಿದೆ ಎಂಬುವುದು ಜನಸಾಮಾನ್ಯರ ಆಗ್ರಹವಾಗಿದೆ.


ಹಾಲು ಉತ್ಪಾದಕರಿಗೆ ಹಳೆಯ ನೋಟು ನೀಡಿಕೆ?
ಜಿಲ್ಲೆಯ ಕೆಲ ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಲು ಮಾರಾಟ ಮಾಡುವ ಹಾಲು ಉತ್ಪಾದಕರಿಗೆ ಹಳೆಯ 500 ಹಾ
ೂ 1000 ರೂ. ಮುಖ ಬೆಲೆಯ ನೋಟುಗಳನ್ನು ಬಟವಾಡೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಸಹಕಾರಿ ಕಾಯ್ದೆಯಡಿ ಬರುವುದರಿ
ಂದ ಡಿಸಿಸಿ. ಬ್ಯಾಂಕ್‌ಗಳಲ್ಲಿ ಖಾತೆ ತೆರೆದು ವಹಿವಾಟು ನಡೆಸುತ್ತವೆ. ಹಾಲು ಪೂರೈಕೆಗೆ ಅನುಗುಣವಾಗಿ ಹಾಲು ಒಕ್ಕೂಟಗಳು ಸಹಕಾರ ಸಂಘಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ ಮಾಡುತ್ತವೆ.

ಪ್ರಸ್ತುತ ಕೇಂದ್ರ ಸರಕಾರ ನೋಟ್ ರದ್ದುಗೊಳಿಸಿದ ಆದೇಶದ ನಂತರ ಡಿ.ಸಿ.ಸಿ. ಬ್ಯಾಂಕ್‌ಗಳಿಗೆ ಅಗತ್ಯವಿರುವಷ್ಟು ಕರೆನ್ಸಿ ಪೂರೈಕೆಯಾಗುತ್ತಿಲ್ಲ. ಇದರಿಂದ ಹಾಲು ಒಕ್ಕೂಟ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಸಮರ್ಪಕವಾಗಿ ಹಣ ಸಂದಾಯವಾಗುತ್ತಿಲ್ಲ. ಇದರಿಂದ ಹಾಲು ಮಾರಾಟ ಮಾಡುವವರಿಗೆ ಕಳೆದೆರೆಡು ವಾರಗಳಿಂದ ತಾವು ಮಾರಾಟ ಮಾಡಿದ ಹಾಲಿನ ಪ್ರಮಾಣಕ್ಕೆ ಅನುಗುಣವಾಗಿ ಹಣ ಲಭಿಸುತ್ತಿಲ್ಲ.


ಈ ನಡುವೆ ಕೆಲ ಹಾಲು ಉತ್ಪಾದಕರು ಹಾಲು ಮಾರಾಟ ಗಾರರಿಗೆ ರದ್ದುಗೊಳಿಸಲಾಗಿರುವ 500, 1000 ರೂ. ನೋಟು ನೀಡಿ ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಿಕೊಂಡು ಹೊಸ ನೋಟು ಪಡೆದುಕೊಳ್ಳುವಂತೆ ಹೇಳುತ್ತಿದ್ದಾರೆ ಎಂದು ಕೆಲ ಹಾಲು ಮಾರಾಟಗಾರರು ಆರೋಪಿಸುತ್ತಿದ್ದು, ಈ ಕುರಿತಂತೆ ಸಂಬಂಧಿಸಿದ ಇಲಾಖೆಗಳು ಗಮನಹರಿಸಿ ಪರಿಶೀಲನೆ ನಡೆಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X