ಜೂಜಾಟ: ಏಳು ಜನರ ಬಂಧನ
ಶಿವಮೊಗ್ಗ, ಡಿ. 3: ಅಂದರ್-ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಏಳು ಜನರನ್ನು ಬಂಧಿಸಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಎಲ್.ಬಿ.ಕಾಲೇಜ್ ಎದುರಿನ ಸಿಂಗಾಪೂರ್ ರಸ್ತೆಯಲ್ಲಿ ವರದಿಯಾಗಿದೆ.
ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಗಳಿಂದ 46,520 ರೂಪಾಯಿ, 8 ಮೊಬೈಲ್, 5 ಮೋಟಾರ್ ಬೈಕ್ ಹಾಗೂ ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





