Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರಿನಲ್ಲಿ ಗಮನ ಸೆಳೆದ ಮಕ್ಕಳ...

ಪುತ್ತೂರಿನಲ್ಲಿ ಗಮನ ಸೆಳೆದ ಮಕ್ಕಳ ವಿಜ್ಞಾನ ಸಮಾವೇಶ

ಮಕ್ಕಳಿಂದ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡನೆ

ವಾರ್ತಾಭಾರತಿವಾರ್ತಾಭಾರತಿ3 Dec 2016 11:54 PM IST
share
ಪುತ್ತೂರಿನಲ್ಲಿ ಗಮನ ಸೆಳೆದ ಮಕ್ಕಳ ವಿಜ್ಞಾನ ಸಮಾವೇಶ

  ಪುತ್ತೂರು, ಡಿ.3 : ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ರಾಜ್ಯ ವಿಜ್ಞಾನ ಪರಿಷತ್ತು, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಂಯುಕ್ತಾಶ್ರಯದಲ್ಲಿ ಪುತ್ತೂರು ನಗರದ ಸುದಾನ ವಸತಿ ಶಾಲೆಯಲ್ಲಿ ಶನಿವಾರ ಆರಂಭಗೊಂಡ ಮೂರು ದಿನಗಳ ಕಾಲದ 24 ನೇ ಅಖಿಲ ಕರ್ನಾಟಕ ಮಕ್ಕಳ ವಿಜ್ಞಾನ ಸಮಾವೇಶ-2016 ದಲ್ಲಿ ಮಕ್ಕಳು ಮಂಡಿಸಿದ ವೈಜ್ಞಾನಿಕ ಯೋಜನಾ ಪ್ರಬಂಧ ಸ್ಪರ್ಧೆ ಗಮನ ಸೆಳೆಯಿತು.

       "ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ’’- ಎಂಬ ಕೇಂದ್ರ ವಿಷಯದಡಿ ವಿವಿಧ ವಿಷಯಗಳ ಕುರಿತು ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಐವರು ವಿದ್ಯಾರ್ಥಿಗಳನ್ನೊಳಗೊಂಡ ತಂಡವು ತಮ್ಮ ಶಾಲಾ ವ್ಯಾಪ್ತಿಯ ಪರಿಸರದಲ್ಲಿನ ಸಮಸ್ಯೆಗಳನ್ನು ಗುರುತಿಸಿ ಸ್ವತಃ ಸಮೀಕ್ಷೆ ಕೈಗೊಂಡು ಸಂಶೋಧಿಸಿ, ವಿಶ್ಲೇಷಿಸುವ ಮೂಲಕ ವೈಜ್ಞಾನಿಕ ಯೋಜನೆ ತಯಾರಿಸಿ ಹಿರಿಯ ವಿಜ್ಞಾನಿಗಳಂತೆ ಪ್ರಬಂಧ ಮಂಡಿಸಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

 24 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ  ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆಗೆ ಸಂಬಂಧಿಸಿದಂತೆ ಶಕ್ತಿ, ಆರೋಗ್ಯ,ಸ್ವಚ್ಚತೆ ಮತ್ತು ಪೋಷಣೆ, ನವೀನ ಆಹಾರ ಮತ್ತು ವ್ಯವಸಾಯ,ಜೀವನಶೈಲಿ ಮತ್ತು ಜೀವನಾಧಾರ, ವಿಪತ್ತು ನಿರ್ವಹಣೆ, ನೀರಿನ ಸಂರಕ್ಷಣೆ, ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಭೂಮಿಯ ಸಂಪನ್ಮೂಲಗಳು, ಪರಿಸರ ವ್ಯವಸ್ಥೆಗಳು, ಇತ್ಯಾದಿ ಕಾರ್ಯ ಮತ್ತು ಚಟುವಟಿಕೆಗಳು ಮುಂತಾದ ವಿಷಯಗಳ ಕುರಿತು ತಮ್ಮ ಪ್ರಯೋಗಗಳ ಮೂಲಕ ತಮ್ಮ ಶಾಲೆಯ ಸುತ್ತಮುತ್ತ ಕೈಗೊಂಡ ಸಮೀಕ್ಷೆಯನ್ನು ಕಿರಿಯ ವಿಜ್ಞಾನಿಗಳು ಅಂಕಿ ಅಂಶಗಳ ಸಮೇತ ಸಮಾವೇಶದಲ್ಲಿ ಅನಾವರಣಗೊಳಿಸಿದರು.

ಐವರನ್ನೊಳಗೊಂಡ ತಂಡದಲ್ಲಿ ರಚಿಸಿದ ಯೋಜನೆಗಳನ್ನು ಯಶಸ್ವಿಯಾಗಿ ಮಂಡಿಸಿ ತಮ್ಮ ಪ್ರತಿಭೆ ಮೆರೆದರು. ಗ್ರಾಮೀಣ ಭಾಗದ ಮಕ್ಕಳು ಗ್ರಾಮಾಂತರ ಪ್ರದೇಶದ ಸಮಸ್ಯೆಗಳನ್ನು ಗುರುತಿಸಿ ಪರಿಸರ ಅಧ್ಯಯನ ಕೈಗೊಂಡು ಹಿರಿಯ ವಿಜ್ಞಾನಿಗಳ ಮಾದರಿಯಲ್ಲಿಯೇ ಪ್ರಬಂಧ ಮಂಡಿಸಿದ್ದು ಗಮನ ಸೆಳೆಯಿತು.

      ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸಹಕಾರಿಯಾಗಿದ್ದು, ಮಕ್ಕಳಲ್ಲಿ ವಿಜ್ಞಾನ ವಿಷಯದಲ್ಲಿ ಆಸಕ್ತಿ, ಕುತೂಹಲ, ಸಂಶೋಧನಾ ಪ್ರವೃತ್ತಿ ಬೆಳೆಸುದರೊಂದಿಗೆ ಸೃಜನಶೀಲತೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವಕೈಗೊಂಡ ಸಮೀಕ್ಷೆಯನ್ನು ಕಿರಿಯ ವಿಜ್ಞಾನಿಗಳು ಅಂಕಿ ಅಂಶಗಳ ಸಮೇತ ಸಮಾವೇಶದಲ್ಲಿ ಅನಾವರಣಗೊಳಿಸಿದರು. ಐವರನ್ನೊಳಗೊಂಡ ತಂಡದಲ್ಲಿ ರಚಿಸಿದ ಯೋಜನೆಗಳನ್ನು ಯಶಸ್ವಿಯಾಗಿ ಮಂಡಿಸಿ ತಮ್ಮ ಪ್ರತಿಭೆ ಮೆರೆದರು.

ಜಿಲ್ಲಾಮಟ್ಟದಲ್ಲಿ ಉತ್ತಮವಾಗಿ ಪ್ರಬಂಧ ಮಂಡಿಸಿ ಆಯ್ಕೆಯಾಗಿರುವ ತಲಾ 10 ತಂಡಗಳಂತೆ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 340 ಕಿರಿಯ ವಿಜ್ಞಾನಿಗಳು ಈ ಸಮಾವೇಶದಲ್ಲಿ ಪ್ರಬಂಧ ಮಂಡಿಸಲಿದ್ದಾರೆ. ರಾಜ್ಯಮಟ್ಟದಲ್ಲಿ ಆಯ್ಕೆಯಾಗುವ ಮೊದಲ 30 ತಂಡಗಳು ಡಿ.27 ರಿಂದ 31 ರ ವರೆಗೆ ಮಹಾರಾಷ್ಟ್ರದ ಬಾರಾಮತಿ ನಗರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯಲಿವೆ.

     

share
ವಾರ್ತಾಭಾರತಿ
ವಾರ್ತಾಭಾರತಿ
Next Story
X