Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಸ ರಾಷ್ಟ್ರೀಯ ಜಲನೀತಿ ರೂಪುಗೊಳ್ಳಲಿ:...

ಹೊಸ ರಾಷ್ಟ್ರೀಯ ಜಲನೀತಿ ರೂಪುಗೊಳ್ಳಲಿ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ4 Dec 2016 12:02 AM IST
share
ಹೊಸ ರಾಷ್ಟ್ರೀಯ ಜಲನೀತಿ ರೂಪುಗೊಳ್ಳಲಿ: ಬಸವರಾಜ ಬೊಮ್ಮಾಯಿ

ಜಲವಿವಾದ ನ್ಯಾಯಮಂಡಳಿಗಳಿಗೆ ನಿವೃತ್ತ ನ್ಯಾಯಾಧೀಶರನ್ನು ನೇಮಿಸಲಾಗುತ್ತದೆ. ತಾವು ಈ ಜಮೀನಿನಿಂದ ನಿವೃತ್ತಿಯಾಗುವವರೆಗೂ ಸದಸ್ಯರಾಗಿರಬೇಕು ಎಂದು ಅವರು ಬಯಸುತ್ತಾರೆ. ಹೀಗಾಗಿ ನ್ಯಾಯಮಂಡಳಿಗಳಿಂದ ಯಾವುದೇ ಜಲ ವಿವಾದ ಪರಿಹರಿಸಲು ಸಾಧ್ಯವಿಲ್ಲ. 1956ರ ಅಂತಾರಾಜ್ಯ ನದಿ ವಿವಾದ ಕಾಯ್ದೆ ರದ್ದು ಪಡಿಸಿ, ಹೊಸ ರಾಷ್ಟ್ರೀಯ ಜಲ ನೀತಿ ರೂಪಿಸಬೇಕು ಹೀಗೆಂದು ಅಭಿಪ್ರಾಯ ಪಟ್ಟ ವರು ಶಾಸಕ ಬಸವರಾಜ ಬೊಮ್ಮಾಯಿ.

ರೈತರ ನೀರಿನ ಸಮಸ್ಯೆ ಮತ್ತು ಸಾಹಿತ್ಯ ವಲಯಕ್ಕೆ ಕೊಂಡಿ ಬೆಸೆದ ಅವರು, ರಾಜ್ಯದ 17 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಇನ್ನೂ ನೀರಾವರಿ ಸೌಲಭ್ಯ ಕಲ್ಪಿಸಬೇಕಿದೆ. ಮುಂದಿನ ಹತ್ತು ವರ್ಷಗಳನ್ನು ನೀರಾವರಿ ದಶಕ ಎಂದು ಘೋಷಿಸಿ, ನೀರಾವರಿ ಯೋಜನೆಗಳಿಗೆ ಸರಕಾರ ವಿಶೇಷ ಆದ್ಯತೆ ನೀಡಬೇಕು. ಈ ಜಲಕ್ರಾಂತಿಗೆ ಸಾಹಿತ್ಯ ವಲಯ ಒತ್ತಾಸೆಯಾಗಿ ನಿಲ್ಲಬೇಕು ಆಗ್ರಹಿಸಿದರು.

‘ರಾಜ್ಯದ ನೀರು-ನೀರಾವರಿ: ಸಮಸ್ಯೆಗಳು- ಪರಿಹಾ ರಗಳು’ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದ ಸಂದ ರ್ಭದಲ್ಲಿ ಈ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು. ಈ ಸಮ್ಮೇಳನದ ಮೂಲಕ ಎರಡನೆ ಹಸಿರು ಕ್ರಾಂತಿಗೆ ಬೆಂಬಲವಾಗಿ ಜಲಕ್ರಾಂತಿಯ ಹಕ್ಕೊತ್ತಾಯ ನಡೆಯಬೇಕು. ಜಲ ಸಾಹಿತ್ಯದ ಮೂಲಕ ಆಳುವವರಲ್ಲಿ ಜಾಗೃತಿ ಮೂಡಿಸಬೇಕು. ನಾಡಗೀತೆಯ ಭಾಗವಾಗಿ ನೀರೂ ಸೇರ್ಪಡೆಗೊಳ್ಳಬೇಕು ಎಂದು ಅವರು ಮನವಿ ಮಾಡಿದರು. ‘ಆಂಧ್ರಪ್ರದೇಶ, ತೆಲಂಗಾಣದ ಜನರಲ್ಲಿ ಇರುವಷ್ಟು ಜಲಜಾಗೃತಿ ನಮ್ಮ ಜನರಲ್ಲಿ ಇಲ್ಲ. ನೀರು ಮಿತಬಳಕೆ ಮತ್ತು ನೀರು ನಿರ್ವಹಣೆಯ ವಿಷಯದಲ್ಲಿ ಜಾಗೃತಿ ಮೂಡಿಸಬೇಕು. ಕಬ್ಬು-ಭತ್ತ ಬೆಳೆಯಲು ಹನಿ ನೀರಾವರಿ ಕಡ್ಡಾಯಗೊಳಿಸಬೇಕು. ತುಂಗಭದ್ರಾ ಜಲಾಶಯದಲ್ಲಿ 20 ಟಿಎಂಸಿ ಅಡಿ ಹೂಳು ತುಂಬಿದ್ದು, ನವಿಲೆ ಬಳಿ ಸಮಾನಾಂತರ ಜಲಾಶಯ ಹಾಗೂ ರಾಯಚೂರು ಜಿಲ್ಲೆ ತಿಂಥಣಿ ಬಳಿ ಕೃಷ್ಣಾ ನದಿಗೆ ಹೊಸ ಜಲಾಶಯ ನಿರ್ಮಿಸಬೇಕು. ಪಶ್ಚಿಮಘಟ್ಟದಲ್ಲಿ ನದಿಗಳ ಜೋಡಣೆಯಂತಹ ಪರಿಸರ ಸ್ನೇಹಿ ಯೋಜನೆ ಕಾರ್ಯಗತಗೊಳ್ಳಬೇಕು. ಬೇಡ್ತಿ-ವರದಾ ನದಿ ಜೋಡಿಸಬೇಕು. ನಾನು ಜಲಸಂಪನ್ಮೂಲ ಸಚಿವನಿದ್ದಾಗ ರೂಪಿಸಿದ್ದ 7 ಲಕ್ಷ ಎಕರೆಗೆ ಸೂಕ್ಷ್ಮ ನೀರಾವರಿ ಕಲ್ಪಿಸುವ ಯೋಜನೆ ಪೂರ್ಣಗೊಳಿಸಬೇಕು’ ಎಂದರು.

‘ರಾಜ್ಯದಲ್ಲಿ ಒಟ್ಟಾರೆ 3,800ಕ್ಕೂ ಹೆಚ್ಚು ಟಿಎಂಸಿ ಅಡಿ ನೀರು ಲಭ್ಯವಿದ್ದರೂ, ಅದರಲ್ಲಿ 1,186 ಟಿಎಂಸಿ ಅಡಿ ಮಾತ್ರ ನಮಗೆ ಲಭ್ಯ. ಸಾವಿರ ಟಿಎಂಸಿ ಅಡಿಗೆ ನಾವು ಯೋಜನೆ ರೂಪಿಸಿದ್ದು, ಇನ್ನೂ 2 ಸಾವಿರ ಟಿಎಂಸಿ ನೀರು ಬಳಕೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಕೃಷಿಯೋಗ್ಯ ಭೂಮಿ 105 ಲಕ್ಷ ಹೆಕ್ಟೇರ್ ಇದೆ. ಅದರಲ್ಲಿ 65 ಲಕ್ಷ ಹೆಕ್ಟೇರ್‌ಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅವಕಾಶ ಇದೆ. ಆದರೆ, ಈ ವರೆಗೆ ನಾವು ಎಲ್ಲ ಮೂಲಗಳಿಂದ ನೀರಾವರಿ ಸೌಲಭ್ಯ ಕಲ್ಪಿಸಿರುವುದು 48 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಮಾತ್ರ’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X