ನಟಿ ರಮ್ಯಾ ಆಸ್ಪತ್ರೆಗೆ ದಾಖಲು
ಬೆಂಗಳೂರು, ಡಿ.4: ಮಾಜಿ ಸಂಸದೆ, ಚಿತ್ರನಟಿ ರಮ್ಯಾ ತೀವ್ರ ಜ್ವರದಿಂದ ಬಳಲುತ್ತಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಮ್ಯಾರಿಗೆ ವೈರಲ್ ಜ್ವರ ಬಾಧಿಸಿದ್ದು, ಅವರು ಶನಿವಾರ ರಾತ್ರಿ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಒಂದು ವಾರದಿಂದ ಮಂಡ್ಯದಲ್ಲೇ ವಾಸ್ತವ್ಯ ಹೂಡಿದ್ದ ರಮ್ಯಾ ಮೊನ್ನೆ ದಿಲ್ಲಿಗೆ ತೆರಳಿದ್ದರು. ಹವಾಮಾನ ವೈಪರೀತ್ಯದಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.
Next Story