Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಬಿಜೆಪಿ ಸಂಸದರು, ಶಾಸಕರು ನೋಟು...

"ಬಿಜೆಪಿ ಸಂಸದರು, ಶಾಸಕರು ನೋಟು ರದ್ದತಿಗೆ 6 ತಿಂಗಳು ಮೊದಲ ಆದಾಯ ಬಹಿರಂಗಪಡಿಸಲಿ"

ಕೇಂದ್ರಕ್ಕೆ ರೇಣುಕಾ ಶಹಾಣೆ ಹತ್ತು ಸಲಹೆ

ವಾರ್ತಾಭಾರತಿವಾರ್ತಾಭಾರತಿ4 Dec 2016 12:20 PM IST
share
ಬಿಜೆಪಿ ಸಂಸದರು, ಶಾಸಕರು ನೋಟು ರದ್ದತಿಗೆ 6 ತಿಂಗಳು ಮೊದಲ ಆದಾಯ ಬಹಿರಂಗಪಡಿಸಲಿ

ಹೊಸದಿಲ್ಲಿ, ಡಿ.4: ನೋಟು ಅಮಾನ್ಯಗೊಳಿಸಿದ ಬಗೆಗಿನ ವಿವಾದ ಹಾಗೂ ಅವ್ಯವಸ್ಥೆಯ ಧೂಳು ಇನ್ನೂ ಮಾಯವಾಗಿಲ್ಲ. ಬಹುತೇಕ ಜನಸಾಮಾನ್ಯರು ಮೊದಲ ದಿನ ಎದುರಿಸಿದ ಸಮಸ್ಯೆಯನ್ನೇ ಒಂದು ತಿಂಗಳ ಬಳಿಕವೂ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿ ರೇಣುಕಾ ಶಹಾಣೆ ತಮ್ಮ ಅಭಿಪ್ರಾಯವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜನರ ಸಮಸ್ಯೆ ಬಗ್ಗೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಇದು ಪ್ರಧಾನಿಯ ಇಮೇಜ್ ಬದಲಾವಣೆ ಮಾಡುವಂಥದ್ದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಲಕ್ಷಾಂತರ ಮಂದಿ ಇದನ್ನು ಬೆಂಬಲಿಸಿದ್ದಾರೆ ಎಂಬ ಕಲ್ಪನೆ ಕೇವಲ ಭ್ರಮೆ. ಕಪ್ಪುಹಣ ಕೂಡಿಹಾಕಿರುವ ಮಂದಿ ಈ ಕಾನೂನಿನಲ್ಲಿನ ಲೋಪಗಳನ್ನು ದುರುಪಯೋಗಪಡಿಸಿಕೊಂಡು, ಬಚಾವಾಗುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಲ ಬಡವರು ಹಾಗೂ ಬ್ಯಾಂಕ್ ಪ್ರಬಂಧಕರು ರಾತ್ರೋರಾತ್ರಿ ಶ್ರೀಮಂತರಾಗಿದ್ದಾರೆ. ಇದು ನಮ್ಮ ಹಣಕಾಸು ಸಚಿವ ಮುಖವನ್ನು ಕೆಂಪಾಗಿಸಿದೆ ಎಂದು ಬರೆದಿದ್ದಾರೆ.

ಈ ಯೋಜನೆ ಪರಿಣಾಮಕಾರಿಯಾಗಲು ಏನು ಮಾಡಬೇಕು ಎಂಬ ಬಗ್ಗೆ ಸಹಾಣೆ ಹತ್ತು ಸಲಹೆಗಳನ್ನು ನೀಡಿದ್ದಾರೆ. ಮೊಟ್ಟಮೊದಲನೆಯದಾಗಿ, ಬಿಜೆಪಿ ಸಂಸದರು, ಶಾಸಕರು ನೋಟು ರದ್ದತಿಗೆ 6 ತಿಂಗಳು ಮೊದಲ ಆದಾಯ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ತಾಂತ್ರಿಕವಾಗಿ ರಾಜಕಾರಣಿಗಳು ಹೊಂದಿರಬೇಕಾದ ಪ್ರಮಾಣಕ್ಕಿಂತ ಹೆಚ್ಚು ನಗದು, ಚಿನ್ನ ಹಾಗೂ ಆಸ್ತಿ ಹೊಂದಿದ್ದರೆ, ಅಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು; ಟಂಕಶಾಲೆ ತನ್ನ ಕೆಲಸವನ್ನು ಸಮರ್ಪಕವಾಗಿ ಮಾಡಬೇಕು. ಈ ಮೂಲಕ ತಮ್ಮ ಕಠಿಣ ಪರಿಶ್ರಮದ ಹಣಕ್ಕಾಗಿ ಜನ ಅಂಗಲಾಚುವ ಪರಿಸ್ಥಿತಿ ತಪ್ಪಬೇಕು ಎಂದು ಸಲಹೆ ನೀಡಿದ್ದಾರೆ.
ಕಪ್ಪು ಹಣ ಹೊಂದಿರುವವರಿಗೆ ಸರ್ಕಾರ ನೀಡಿದ ವಿನಾಯ್ತಿಗಳಿಂದ ಎಷ್ಟು ಹಣ ಬಂದಿದೆ ಹಾಗೂ ಯಾರು ಈ ಯೋಜನೆಯಡಿ ಆದಾಯ ಘೋಷಿಸಿಕೊಂಡಿದ್ದಾರೆ ಎನ್ನುವುದನ್ನು ಸರ್ಕಾರ ಬಹಿರಂಗಗೊಳಿಸಬೇಕು. ಅಮಿತ್ ಷಾ ಹೊರತುಪಡಿಸಿ ಉಳಿದ ಯಾವ ಮುಖಂಡರೂ ನವೆಂಬರ್ 8ಕ್ಕೆ ಮುನ್ನ ಇದ್ದ ಆಸ್ತಿ ವಿವರ ಬಹಿರಂಗಪಡಿಸಿಲ್ಲ. ತಕ್ಷಣ ಈ ಕೆಲಸ ಆಗಬೇಕು. ಲಂಚಕ್ಕಾಗಿ ಕೈಚಾಚುವ ಸರ್ಕಾರಿ ನೌಕರರಿಗೆ ಯಾವ ಪ್ರಮಾಣದ ಶಿಕ್ಷೆ ವಿಧಿಸಲಾಗುತ್ತದ ಎನ್ನುವುದೂ ಬಹಿರಂಗವಾಗಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X